ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್‌ ಅಪಘಾತ; ಒಬ್ಬ ವಿದ್ಯಾರ್ಥಿ ಸಾವು

Last Updated 23 ಅಕ್ಟೋಬರ್ 2018, 2:38 IST
ಅಕ್ಷರ ಗಾತ್ರ

ಔರಂಗಬಾದ್‌: ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್‌ ಸೋಮವಾರ ರಾತ್ರಿ ಬಿಹಾರದ ಔರಂಗಬಾದ್‌ ಸಮೀಪ ಅಪಘಾತಕ್ಕೀಡಾಗಿದ್ದು, ಒಬ್ಬ ವಿದ್ಯಾರ್ಥಿ ಸಾವಿಗೀಡಾಗಿರುವುದಾಗಿ ತಿಳಿದು ಬಂದಿದೆ.

ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ರಾಜಗಿರ್‌ನಿಂದ ಹಿಂದಿರುಗುವ ಮಾರ್ಗದಲ್ಲಿ ಟ್ರಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ಸಾಗಿಸಲಾಗುತ್ತದೆ ಎಂದು ಇಲ್ಲಿನ ಉಪ–ವಿಭಾಗಾಧಿಕಾರಿ ಪ್ರದೀಪ್‌ ಕುಮಾರ್‌ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT