ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅವನಿ’ ಮರಿಗಳ ರಕ್ಷಣಾ ಕಾರ್ಯಾಚರಣೆ ಚುರುಕು

Last Updated 15 ನವೆಂಬರ್ 2018, 18:32 IST
ಅಕ್ಷರ ಗಾತ್ರ

ಮುಂಬೈ:‘ಅವನಿ’ ಹುಲಿಯ ಮರಿಗಳನ್ನು ಸುರಕ್ಷಿತವಾಗಿ ಹಿಡಿಯುವ ನಿಟ್ಟಿನಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. 200ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಮಹಾರಾಷ್ಟ್ರದ ಅರಣ್ಯ ಇಲಾಖೆ ಹೇಳಿದೆ.

ಎರಡು ವಾರಗಳ ಹಿಂದೆ ‘ಅವನಿ’ಯನ್ನು ಇಲಾಖೆ ಸಿಬ್ಬಂದಿ ಗುಂಡಿಟ್ಟು ಹತ್ಯೆ ಮಾಡಿದ್ದರು. 13 ಜನರನ್ನು ಈ ಹುಲಿ ಬಲಿತೆಗೆದುಕೊಂಡಿತ್ತು ಎಂದು ಆರೋಪಿಸಿ, ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು.

‘ಅವನಿ’ಗೆ 10 ತಿಂಗಳ ಎರಡು ಮರಿಗಳಿದ್ದು, ಅವುಗಳನ್ನು ಸುರಕ್ಷಿತವಾಗಿ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ‘ಅರಣ್ಯಪ್ರದೇಶದ ಕೆಲವು ಕಡೆ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೆ, ಆಹಾರವನ್ನು ಇಟ್ಟಿದ್ದೇವೆ. ಅವುಗಳನ್ನು ಶೀಘ್ರದಲ್ಲಿಯೇ‍ಪತ್ತೆ ಹಚ್ಚಲಾಗುವುದು’ ಎಂದು ಹೆಚ್ಚುವರಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್‌ ಲಿಮಯೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT