ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬರಿ ಮಸೀದಿ ಧ್ವಂಸ ‘ಶೌರ್ಯ ದಿನ’ ಆಚರಣೆ: ಅಯೋಧ್ಯೆಯಲ್ಲಿ ಬಿಗಿ ಭದ್ರತೆ

Last Updated 6 ಡಿಸೆಂಬರ್ 2018, 6:55 IST
ಅಕ್ಷರ ಗಾತ್ರ

ಅಯೋಧ್ಯೆ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಡಿಸೆಂಬರ್‌ 06ರಂದು 26 ವರ್ಷ ಪೂರ್ಣಗೊಳ್ಳಲಿದ್ದು, ಬಲಪಂಥೀಯ ಸಂಘಟನೆಗಳು ಈ ದಿನವನ್ನು ಶೌರ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿವೆ. ಹೀಗಾಗಿ ನಗರದಲ್ಲಿ ಕಟ್ಟೆಚ್ಚರ ವಹಿಸಸಲಾಗಿದೆ.

ಗುರುವಾರ(ಡಿಸೆಂಬರ್‌ 06)ಅನ್ನು ಶೌರ್ಯ ದಿನ ಹಾಗೂ ವಿಜಯ ದಿವಸವನ್ನಾಗಿ ಆಚರಿಸಲು ನಿರ್ಧರಿಸಿರುವ ವಿಶ್ವ ಹಿಂದೂ ಪರಿಷತ್‌(ವಿಎಚ್‌ಪಿ) ಹಾಗೂ ಭಜರಂಗ ದಳ ಸಂಘಟನೆಗಳು, ಈ ದಿನ ಮಣ್ಣಿನ ದೀಪಗಳನ್ನು ಬೆಳಗುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿವೆ. ಇದೇ ವೇಳೆ ಮುಸ್ಲಿಂ ಸಂಘಟನೆಗಳು ಗುರುವಾರವನ್ನು ಕರಾಳ ದಿನವನ್ನಾಗಿ ಆಚರಿಸಲು ನಿರ್ಧಿರಿಸಿವೆ.

ಹೀಗಾಗಿ ಅಯೋಧ್ಯೆಯಲ್ಲಿ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಸದ್ಯಮುಂಜಾಗ್ರತೆಯಾಗಿ ಸಾರ್ವಜನಿಕ ಸ್ಥಳಗಳಾದ ಚಿತ್ರ ಮಂದಿರಗಳು, ರೈಲು ನಿಲ್ದಾಣ, ಮಾರುಕಟ್ಟೆ ಮತ್ತಿತರ ಪ್ರದೇಶಗಳಲ್ಲಿಪೊಲೀಸರು ಹಾಗೂ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.ನಗರಕ್ಕೆ ಪ್ರವೇಶ ಕಲ್ಪಿಸುವ ಮಾರ್ಗಗಳಲ್ಲಿಯೂ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದ್ದು, ವಾಹನಗಳ ಮೇಲೆ ನಿಗಾ ಇಡಲಾಗಿದೆ.

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕಾಯ್ದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಬಾಬರಿ ಮಸೀದಿ ಕ್ರಿಯಾಸಮಿತಿಯು ಮನವಿ ಮಾಡಿದೆ. ಜೊತೆಗೆ ಈ ದಿನವನ್ನು ಶಾಂತಿಯುತವಾಗಿ ಆಚರಿಸಲು ಸಾರ್ವಜನಿಕರಿಗೆ ಕರೆ ನೀಡಿದೆ.

ರಾಮ ದೇವಾಲಯವನ್ನು ನಾಶಗೊಳಿಸಿ ಬಳಿಕ ಅದೇ ಸ್ಥಳದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಿದ್ದಬಲ ಪಂಥೀಯ ಸಂಘಟನೆಗಳ ಕಾರ್ಯಕರ್ತರು, 1992ರ ಡಿಸೆಂಬರ್‌ 06ರಂದು ಬಾಬ್ರಿ ಮಸೀದಿ ಮೇಲೆ ದಾಳಿ ಮಾಡಿ ದ್ವಂಸಗೊಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT