ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ಭೂ ವಿವಾದ: ವಿಚಾರಣೆಯನ್ನು ಜನವರಿಗೆ ಮುಂದೂಡಿದ ಸುಪ್ರೀಂ ಕೋರ್ಟ್

Last Updated 29 ಅಕ್ಟೋಬರ್ 2018, 7:14 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯ ವಿವಾದಿತ ಭೂಪ್ರದೇಶವನ್ನು ಹಂಚಿಕೆ ಮಾಡಿದ್ದರ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. 2019ರ ಜನವರಿಯಲ್ಲಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ, ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌, ಕೆ.ಎಂ. ಜೋಸೆಫ್‌ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.

ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್‌ ಮಂಡಳಿಗೆ ಸಮನಾಗಿ ಹಂಚಿಕೆ ಮಾಡಿ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.

ಇದನ್ನೂ ಓದಿ:ಅಯೋಧ್ಯೆ ತೀರ್ಪು,ಇಸ್ಲಾಂಗೆ ಮಸೀದಿ ಹಂಗಿಲ್ಲ:1994ರ ತೀರ್ಪು ಎತ್ತಿಹಿಡಿದ ‘ಸುಪ್ರೀಂ’

ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದವನ್ನು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ಶಿಫಾರಸು ಮಾಡಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 27ರಂದು ತಿರಸ್ಕರಿಸಿತ್ತು. ಇದರಿಂದ ವಿವಾದಿತ ಭೂಪ್ರದೇಶಕ್ಕೆ ಸಂಬಂಧಿಸಿದ ವಿಚಾರಣೆ ಹಾದಿ ಸುಗಮವಾಗಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT