ಅಯೋಧ್ಯೆ ವಿವಾದ ಇಂದು ವಿಚಾರಣೆ

ನವದೆಹಲಿ: ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ (ಮೇ 10) ವಿಚಾರಣೆ ನಡೆಸಲಿದೆ.
ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವ ನಿಟ್ಟಿನಲ್ಲಿ ರಚಿಸಲಾಗಿರುವ ಮಧ್ಯಸ್ಥಿಕೆ ಸಮಿತಿ ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‌ಗೆ ಗುರುವಾರ ಸಲ್ಲಿಸಿದೆ. ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಂವಿಧಾನ ಪೀಠ, ವಿವಾದವನ್ನು ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸುವ ಸಂಬಂಧ ಮಧ್ಯಸ್ಥಿಕೆ ಸಮಿತಿ
ಯನ್ನು ರಚಿಸಿ ಮಾರ್ಚ್ 8ರಂದು ಆದೇಶ ಹೊರಡಿಸಿತ್ತು.
ಸಂಧಾನಕ್ಕಾಗಿ ಗುಪ್ತಸಭೆಯನ್ನು ನಡೆಸಬೇಕು. ಎಂಟು ವಾರದ ಒಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆಯೂ ಆದೇಶಿಸಲಾಗಿತ್ತು.
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ. ಕಲೀಫುಲ್ಲಾ ಸಮಿತಿ ಮುಖ್ಯಸ್ಥರಾಗಿದ್ದಾರೆ. ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀಶ್ರೀ ರವಿಶಂಕರ್ ಹಾಗೂ ಹಿರಿಯ ವಕೀಲ ಶ್ರೀರಾಮ್ ಪಂಚು ಸಮಿತಿಯಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.