ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ತೀರ್ಪು:  ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

Last Updated 12 ಡಿಸೆಂಬರ್ 2019, 13:38 IST
ಅಕ್ಷರ ಗಾತ್ರ

ನವದೆಹಲಿ: ‘ಅಯೋಧ್ಯೆ ರಾಮಜನ್ಮಭೂಮಿ–ಬಾಬರಿ ಮಸೀದಿ' ಭೂವಿವಾದಕ್ಕೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ 18 ಮರು ಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯಪೀಠವು ಮರು ಪರಿಶೀಲನಾ ಅರ್ಜಿಗಳನ್ನು ತಿರಸ್ಕರಿಸಿದೆ.

ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದಕ್ಕೆ ತೆರೆ ಎಳೆದು ಸುಪ್ರೀಂಕೋರ್ಟ್‌ ನವೆಂಬರ್‌ 9ರಂದು ಐತಿಹಾಸಿಕ ತೀರ್ಪು ನೀಡಿತ್ತು.

ಅಯೋಧ್ಯೆಯ 2.77 ಎಕರೆ ಜಮೀನನ್ನು ಮಂದಿರ ನಿರ್ಮಾಣಕ್ಕಾಗಿ ರಾಮ ಲಲ್ಲಾಕ್ಕೆ ನೀಡಿರುವ ಸುಪ್ರೀಂ ಕೋರ್ಟ್‌, ಅಯೋಧ್ಯೆಯ ಸೂಕ್ತ ಸ್ಥಳದಲ್ಲಿ ಸುನ್ನಿ ವಕ್ಫ್‌ ಬೋರ್ಡ್‌ಗೆ 5 ಎಕರೆ ಜಮೀನು ನೀಡಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿ ತನ್ನ ಅಂತಿಮ ತೀರ್ಪು ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT