ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ತೀರ್ಪು: ಸುಪ್ರೀಂ ಕೋರ್ಟ್‌ ಆದೇಶದ ಮುಖ್ಯಾಂಶಗಳು

Last Updated 9 ನವೆಂಬರ್ 2019, 6:04 IST
ಅಕ್ಷರ ಗಾತ್ರ

ಅಯೋಧ್ಯೆ ತೀರ್ಪಿನ ಮುಖ್ಯಾಂಶಗಳು

* ಟ್ರಸ್ಟ್‌ ರಚಿಸಲು, ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮತ್ತು ಮಸೀದಿಗೆ ಪರ್ಯಾಯ ಭೂಮಿ ನೀಡಲುಸರ್ಕಾರಕ್ಕೆ 3–4 ತಿಂಗಳ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

* ಮಂದಿರ ನಿರ್ಮಾಣ ಹೊಣೆ ಸರ್ಕಾರಕ್ಕೆ,ನಿರ್ವಹಣೆ ಹೊಣೆ ಟ್ರಸ್ಟ್‌ಗೆ ನೀಡುವಂತೆ ಸರ್ಕಾರಕ್ಕೆಆದೇಶ

* ಸುನ್ನಿ ವಕ್ಫ್‌ ಬೋರ್ಡ್‌ಗೆಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಆದೇಶ

* ವಿವಾದಿತ ಜಮೀನು ರಾಮಲಲ್ಲಾಗೆ ಸೇರಿದ್ದು, ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಿ ಎಂದ ಸುಪ್ರೀಂ ಕೋರ್ಟ್‌

* ವಿವಾದಿತ ಜಾಗವನ್ನು ಮೂರು ಭಾಗ ಮಾಡಿದ್ದಕ್ಕೆ ಎಲ್ಲೆಡೆಯಿಂದಲೂ ವಿರೋಧವಿದೆ

* ಮಸೀದಿಗೆ ಹಾನಿ ಮಾಡಿದ್ದು, ಕಾನೂನು ಕೈಗೆ ತೆಗೆದುಕೊಂಡಿದ್ದೂ ಸರಿಯಲ್ಲ

* ಬಾಬರಿ ಮಸೀದಿಯನ್ನು ಖಾಲಿ ಜಮೀನಿನಲ್ಲಿ ನಿರ್ಮಿಸಿದ್ದಲ್ಲ ಅಲ್ಲಿ ದೊಡ್ಡ ಕಟ್ಟಡವಿತ್ತು, ಆ ಕಟ್ಟಡವು ಇಸ್ಲಾಮಿಕ್ ಮೂಲದ್ದಲ್ಲ ಅಂತ ಪುರಾತತ್ವ ಇಲಾಖೆ ಹೇಳಿದೆ. ಬಾಬರಿ ಕಟ್ಟಡದ ಅಡಿಯಲ್ಲಿ ಇಸ್ಲಾಮೇತರ ಕಟ್ಟಡದ ಅವಶೇಷವಿತ್ತು. ಮಂದಿರವನ್ನು ಧ್ವಂಸ ಮಾಡಿರುವ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.

* ಹಿಂದೂಗಳು ಅಯೋಧ್ಯೆಯನ್ನು ರಾಮನ ಜನ್ಮಸ್ಥಾನ ಅಂತ ನಂಬಿದ್ದಾರೆ, ಈ ವಿಚಾರದಲ್ಲಿ ಅವರಿಗೆ ಧಾರ್ಮಿಕ ಭಾವನೆಗಳಿವೆ. ಮುಸ್ಲಿಮರು ಆ ಜಾಗ ಬಾಬ್ರಿ ಮಸೀದಿಯದ್ದು ಅಂತಾರೆ. ಆದರೆ ರಾಮ ಅಲ್ಲಿ ಜನಿಸಿದ್ದ ಎಂಬ ಹಿಂದುಗಳ ನಂಬಿಕೆ ವಿವಾದರಹಿತವಾದದ್ದು

*ಪುರಾತತ್ವ ಇಲಾಖೆಯ ಶೋಧನೆಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ

* ರಾಮ ಅಲ್ಲಿಯೇ ಜನಿಸಿದ ಎಂಬುದು ಹಿಂದುಗಳ ನಂಬಿಕೆ. ನಂಬಿಕೆಯು ವೈಯಕ್ತಿಕ ವಿಷಯ

* ಹಿಂದುಗಳು ಅಯೋಧ್ಯೆಯನ್ನು ರಾಮಜನ್ಮಭೂಮಿ ಅಂತ ಒಪ್ಪಿಕೊಂಡಿರುವುದಲ್ಲಿ ಯಾವುದೇ ವಿವಾದ ಇಲ್ಲ

* ಬಾಬ್ರಿ ಮಸೀದಿಯನ್ನು ಖಾಲಿ ಜಾಗದಲ್ಲಿ ನಿರ್ಮಿಸಲಾಗಿಲ್ಲ,ವಿವಾದಿತ ಕಟ್ಟಡ ಇಸ್ಲಾಮಿಕ್ ಸಂರಚನೆ ಹೊಂದಿಲ್ಲ

* ನಿರ್ಮೋಹಿ ಅಖಾಡದ ಅರ್ಜಿ ವಜಾ, ರಾಮಲಲ್ಲಾ ಮುಖ್ಯ ಅರ್ಜಿದಾರ ಎಂದು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್‌

ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿರುವವರು: ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ,ನ್ಯಾಯಮೂರ್ತಿಗಳಾದಎಸ್‌ ಎ ಬೊಬ್ಡೆ, ಡಿ.ವೈ.ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT