ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ವಿರುದ್ಧದ ಹೋರಾಟಕ್ಕೆ ₹ 25 ಕೋಟಿ ಘೋಷಿಸಿದ ಬಾಬಾ ರಾಮದೇವ್

Last Updated 30 ಮಾರ್ಚ್ 2020, 16:43 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವದಾದ್ಯಂತ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಗೆ (PM CARES fund) ಹಲವಾರು ಜನರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಯೋಗ ಗುರು ಬಾಬಾ ರಾಮದೇವ್ ಕೂಡ ಸೇರ್ಪಡೆಯಾಗಿದ್ದಾರೆ.

ಬಾಬಾ ರಾಮದೇವ್ ತಮ್ಮ ಪತಂಜಲಿ ಸಂಸ್ಥೆಯ ವತಿಯಿಂದ ₹ 25 ಕೋಟಿಯನ್ನು ಕೊಡುಗೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಯೋಗ ಗುರು ಬಾಬಾ ರಾಮದೇವ್, ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ಪರಿಹಾರ ನಿಧಿಗೆ ತಮ್ಮ ಸಂಸ್ಥೆ ಪತಂಜಲಿ ₹ 25 ಕೋಟಿ ರೂ. ಕೊಡುಗೆಯನ್ನು ನೀಡಲಿದೆ ಎಂದು ಹೇಳಿದ್ದಾರೆ.

ಭಾರತದ ಅತ್ಯಂತ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರವಾಗಿರುವ ಮುಕೇಶ್ ಅಂಬಾನಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹ 5 ಕೋಟಿ ನೀಡಿದ್ದಾರೆ.

ನೀತಾ ಅಂಬಾನಿ ನೇತೃತ್ವದ ರಿಲಯನ್ಸ್ ಫೌಂಡೇಶನ್ ದೇಶಾದ್ಯಂತ ನಿರ್ಗತಿಕರಿಗೆ ಉಚಿತ ಊಟ ನೀಡುವುದಾಗಿ ಭರವಸೆ ನೀಡಿದೆ. ಇದಲ್ಲದೆ ಕೋವಿಡ್-19ನೊಂದಿಗೆ ಹೋರಾಡುವ ರೋಗಿಗಳಿಗೆ ಅಂಬಾನಿ ಸಂಪೂರ್ಣ ಆಸ್ಪತ್ರೆಯನ್ನು ಬಿಟ್ಟುಕೊಟ್ಟಿದ್ದಾರೆ.
ರತನ್ ಟಾಟಾ ಕೂಡ ಕೋವಿಡ್-19 ವಿರುದ್ಧ ಹೋರಾಡಲು ₹1,500 ಕೋಟಿ ನೀಡುವುದಾಗಿ ವಾಗ್ದಾನ ಮಾಡಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ಕಾರಕ್ಕೆ ನೆರವು ನೀಡುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT