ಅಯೋಧ್ಯೆ: ಬಾಬರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 26 ವರ್ಷ. ಈ ವರ್ಷಾಚರಣೆ ಅಂಗ ವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ)ಅಯೋಧ್ಯೆಯಲ್ಲಿ ಗುರುವಾರ (ಡಿಸೆಂಬರ್ 6) ಶೌರ್ಯ ದಿನ ಕಾರ್ಯಕ್ರಮ ಹಮ್ಮಿಕೊಂಡಿದೆ.ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಣೆಗೆ ನಿರ್ಧರಿಸಿವೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಪಕ್ಷಗಳ ದೃಷ್ಟಿ ಅಯೋಧ್ಯೆ ಕಡೆಗೆ ನೆಟ್ಟಿದೆ. ವಿಎಚ್ಪಿ ಜೊತೆಗೆ ಕೈಜೋಡಿಸಿರುವ ಕೆಲವು ಅಖಾಡಗಳು ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಿವೆ.

ಅಯೋಧ್ಯೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದೆ. ವಿವಾದಿತ ನಿವೇಶನದಸಮೀಪ ಬುಧವಾರ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಹಿಂದೂ ಸಮಾಜ ಪಾರ್ಟಿಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

‘ಹೋಟೆಲ್ಗಳು ಹಾಗೂ ಧರ್ಮಶಾಲಾಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಪಟ್ಟಣಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ಸಹ ನಡೆಸಲಾಗುತ್ತಿದೆ. ಪಟ್ಟಣದ ಎಲ್ಲ ಪ್ರವೇಶ ದ್ವಾರಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಕ್ಷಿಪ್ರ ಕಾರ್ಯಪಡೆಯ ಯೋಧರು ಸೇರಿ ವಿವಿಧ ಪಡೆ ನಿಯೋಜಿಸಲಾಗಿದೆ. 2,500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

‘ಬಿಜೆಪಿಯಿಂದ ರಾಜಕೀಯ ಲಾಭಕ್ಕಾಗಿ ಮಂದಿರ ವಿಷಯ ಬಳಕೆ’

ರಾಜಕೀಯ ಲಾಭಕ್ಕಾಗಿ ರಾಮ ಮಂದಿರ ವಿಷಯವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ (ಎಎಚ್ಪಿ) ಅಧ್ಯಕ್ಷ ಪ್ರವೀಣ್ ತೊಗಾಡಿಯಾಮುಜಪ್ಫರ್ನಗರದಲ್ಲಿ ಆರೋಪಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಟೀಕಿಸಿದರು.

‘ಬಹಳ ವರ್ಷಗಳ ಕನಸಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು. ಅದಕ್ಕಾಗಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ನಾವೂ ಸ್ಪರ್ಧಿಸಲಿದ್ದೇವೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.