ಭಾನುವಾರ, ಸೆಪ್ಟೆಂಬರ್ 26, 2021
23 °C

ಫೋನಿ ಅಬ್ಬರ: ರೈಲ್ವೆ ಆಸ್ಪತ್ರೆಯಲ್ಲಿ ಹುಟ್ಟಿದ ಮಗುವಿಗೆ ಚಂಡಮಾರುತದ ಹೆಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಒಡಿಶಾದಲ್ಲಿ ಫೋನಿ ಚಂಡಮಾರುತದ ಅಬ್ಬರ ಜೋರಾಗಿದ್ದು, ಇಲ್ಲಿನ ರೈಲ್ವೆ ಆಸ್ಪತ್ರೆಯಲ್ಲಿ ಶುಕ್ರವಾರ ಹುಟ್ಟಿದ ಹೆಣ್ಣು ಮಗುವಿಗೆ ‘ಫೋನಿ’ ಎಂದು ಹೆಸರಿಡಲಾಗಿದೆ.

ರಾಜ್ಯದಲ್ಲಿ ‘ಫೋನಿ’ಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇದೇ ದಿನ ಜನಿಸಿದ ಕಾರಣ ಮಗುವಿಗೆ ಅದರ(ಚಂಡಮಾರುತದ) ಹೆಸರನ್ನು ಇಡಲಾಗಿದೆ.

ಮಗುವಿನ ತಾಯಿ ರೈಲ್ವೆ ಇಲಾಖೆ ಸಿಬ್ಬಂದಿಯಾಗಿದ್ದು, ಇಲ್ಲಿನ ಮಂಚೇಶ್ವರ್‌ನಲ್ಲಿರುವ ಕೋಚ್‌ ದುರಸ್ತಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸಮಾಡುತ್ತಿದ್ದಾರೆ. ಬೆಳಗ್ಗೆ 11.03 ಗಂಟೆ ವೇಳೆಗೆ ಹೆರಿಗೆಯಾಗಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು