ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ ಮುಖ್ಯಮಂತ್ರಿಯಾಗಿ ಕಾನ್ರಾಡ್‌ ಸಂಗ್ಮಾ ಅಧಿಕಾರ

Last Updated 6 ಮಾರ್ಚ್ 2018, 7:28 IST
ಅಕ್ಷರ ಗಾತ್ರ

ಶಿಲ್ಲಾಂಗ್‌: ನ್ಯಾಷನಲ್‌ ಪೀಪಲ್ಸ್‌ ಪಾರ್ಟಿಯ(ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್‌ ಸಂಗ್ಮಾ ಮೇಘಾಲಯ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಗಂಗಾ ಪ್ರಸಾದ್‌ ಅವರು ಕಾನ್ರಾಡ್‌ ಸಂಗ್ಮಾ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಮಣಿಪುರದ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ನಳಿನ್‌ ಕೊಹ್ಲಿ  ಕಾರ್ಯಕ್ರಮದಲ್ಲಿ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT