ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ

Last Updated 13 ಜೂನ್ 2019, 17:28 IST
ಅಕ್ಷರ ಗಾತ್ರ

ನವದೆಹಲಿ: ಇತರ ಹಿಂದುಳಿದ ವರ್ಗಗಳ ಉಪವರ್ಗೀಕರಣಗೊಳಿಸುವ ಆಯೋಗದ ಅವಧಿಯನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ.

ದೆಹಲಿ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜಿ.ರೋಹಿಣಿ ಅವರ ನೇತೃತ್ವದಲ್ಲಿ ಈ ಆಯೋಗವನ್ನು 2017ರ ಅಕ್ಟೋಬರ್‌ 2ರಂದು ರಚಿಸಲಾಗಿತ್ತು.

’ಜುಲೈ 31ರವರೆಗೆ ಆಯೋಗದ ಅವಧಿಯನ್ನು ವಿಸ್ತರಿಸಲಾಗಿದೆ. ಮೇ 31ಕ್ಕೆ ಆಯೋಗದ ಅವಧಿ ಮುಕ್ತಾಯವಾಗಬೇಕಾಗಿತ್ತು. ಇದೀಗ ಆರನೇ ಬಾರಿ ಅವಧಿ ವಿಸ್ತರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಪಟ್ಟಿಯಲ್ಲಿರುವ ಹಿಂದುಳಿದ ವರ್ಗಗಳನ್ನು ಉಪವರ್ಗೀಕರಣಗೊಳಿಸುವ ಕಾರ್ಯವನ್ನು ಆಯೋಗವು ಕೈಗೊಂಡಿದೆ.ವರ್ಗೀಕರಣಗೊಳಿಸುವುದರಿಂದ ಮೀಸಲಾತಿಯಲ್ಲೇ ಒಳಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಮಂಡಿಸಬಹುದು. ಇದು ರಾಷ್ಟ್ರ ರಾಜಕೀಯದ ಮೇಲೆ ವ್ಯಾಪಕ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT