ಭಾನುವಾರ, ಮಾರ್ಚ್ 29, 2020
19 °C
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ

ನವಲಖಾ, ತೇಲ್ತುಂಬೆ ಜಾಮೀನು ಅರ್ಜಿ ತಿರಸ್ಕೃತ, ಶರಣಾಗಲು ಸುಪ್ರೀಂ ಕೋರ್ಟ್ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕುಗಳ ಹೋರಾಟಗಾರರಾದ ಗೌತಮ್ ನವಲಖಾ ಮತ್ತು ಆನಂದ್ ತೇಲ್ತುಂಬೆ ಅವರ ಜಾಮೀನು ಅರ್ಜಿಯನ್ನು  ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. 

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್. ಷಾ ಅವರನ್ನೊಳಗೊಂಡ ಪೀಠವು ಇಬ್ಬರು ಹೋರಾಟಗಾರರಿಗೆ ಮೂರು ವಾರದೊಳಗೆ ಶರಣಾಗಲು ಸೂಚಿಸಿದೆ. ಇಬ್ಬರ ಪಾಸ್‌ಪೋರ್ಟ್‌ಗಳನ್ನೂ ಒಪ್ಪಿಸುವಂತೆ ನ್ಯಾಯಾಲಯ ಹೇಳಿದೆ. 

2018ರ ಜ. 1ರಂದು ಪುಣೆ ಜಿಲ್ಲೆಯ ಕೋರೆಗಾಂವ್ ಭೀಮಾ ಗ್ರಾಮದಲ್ಲಿ ನಡೆದ ಹಿಂಸಾಚಾರದ ನಂತರ ನವಲಖಾ, ತೇಲ್ತುಂಬೆ ಮತ್ತು ಇತರ ಕಾರ್ಯಕರ್ತರ ವಿರುದ್ಧ ಮಾವೋವಾದಿಗಳ ಸಂಪರ್ಕ ಸೇರಿದಂತೆ ಇತರ ಆರೋಪಗಳ ಕಾರಣಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು