ಗುರುವಾರ , ಫೆಬ್ರವರಿ 25, 2021
19 °C
ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಬಂಡಿಪುರ ಹುಲಿ ಸಂರಕ್ಷಿತಾರಣ್ಯಕ್ಕೆ ಬದಲಿ ಮಾರ್ಗ ರೂಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಂಡಿಪುರ ಹುಲಿ ಸಂರಕ್ಷಿತಾರಣ್ಯದ ಮೂಲಕ ಸಾಗುವ ರಸ್ತೆಯನ್ನು ಶಾಶ್ವತವಾಗಿ ಮುಚ್ಚುವ ಸಲುವಾಗಿ, ಬದಲಿ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಪಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ರಾಷ್ಟ್ರೀಯ ಉದ್ಯಾನದ ಪ್ರಮುಖ ಪ್ರದೇಶ (ಕೋರ್‌ ಏರಿಯಾ) ಆಗಿರುವ ಕಾರಣ ಇದನ್ನು ಪರಿಗಣಿಸುವಂತೆ ಹೇಳಿದೆ.

ರಾಷ್ಟ್ರೀಯ ಹೆದ್ದಾರಿ 212 ರಲ್ಲಿ ರಾತ್ರಿ ಸಂಚಾರ ನಿಷೇಧ ಹೇರಿರುವುದು ಮುಂದುವರಿಯಲಿ ಎಂದು ನ್ಯಾಯಮೂರ್ತಿ ಆರ್‌.ಎಫ್‌.ನಾರಿಮನ್‌ ಮತ್ತು ಸೂರ್ಯಕಾಂತ್‌ ಅವರನ್ನು ಒಳಗೊಂಡ ಪೀಠ ಆದೇಶಿಸಿದೆ. ರಾಷ್ಟ್ರೀಯ ಹೆದ್ದಾರಿ 275 ಮತ್ತು ರಾಜ್ಯ ಹೆದ್ದಾರಿ ಸಂಖ್ಯೆ 90 ಅನ್ನು ಹೇಗೆ ರಾಷ್ಟ್ರೀಯ ಹೆದ್ದಾರಿಯಾಗಿ ಮಾಡಬಹುದು ಎಂಬ ಬಗ್ಗೆ ಸಲಹೆಯನ್ನು ನಾಲ್ಕು ವಾರಗಳ ಒಳಗೆ ನೀಡುವಂತೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಕೇಳಿದೆ.

ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಿರುವುದನ್ನು ಮುಂದುವರಿಸಬೇಕು ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಪರಿಸರ ಮತ್ತು ಅರಣ್ಯ ಸಚಿವಾಲಯ ಸಲಹೆ ನೀಡಿದ್ದವು. ರಾಷ್ಟ್ರೀಯ ಹೆದ್ದಾರಿ 275 ಮತ್ತು ರಾಜ್ಯ ಹೆದ್ದಾರಿ ಸಂಖ್ಯೆ 90 ರಲ್ಲಿನ ಮೈಸೂರಿಗೆ ಬದಲಿ ಮಾರ್ಗಕ್ಕೆ ಕರ್ನಾಟಕ ಸರ್ಕಾರವೂ ಕ್ರಮ ಕೈಗೊಳ್ಳುತ್ತಿದೆ. 

ಕರ್ನಾಟಕದ ಕೊಳ್ಳೇಗಾಲ ಮತ್ತು ಕೇರಳದ ಕೋಯಿಕ್ಕೋಡ್‌ ಅನ್ನು ಸಂಪರ್ಕಿಸುವ ಎನ್‌ಎಚ್‌ 212ರಲ್ಲಿ 24.5 ಕಿ.ಮೀ ಪ್ರಮುಖ ಪ್ರದೇಶ ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮೂಲಕ ಸಾಗುತ್ತದೆ. ಇದರಲ್ಲಿ 19.7 ಕಿ.ಮೀ ಕರ್ನಾಟಕದೊಳಗಿದ್ದರೆ 4.8 ಕಿ.ಮೀ ಕೇರಳದಲ್ಲಿದೆ. ರಸ್ತೆಯ ಮತ್ತೊಂದು ಭಾಗದಲ್ಲಿ 10.10 ಕಿ.ಮೀ ವನ್ಯಜೀವಿ ಧಾಮದ ಮೂಲಕ ಸಾಗುತ್ತದೆ. ಇದು ಬಫರ್‌ ವಲಯವಾಗಿದೆ. ಇದರಲ್ಲಿ 4.5 ಕಿ.ಮೀ ಕರ್ನಾಟಕದಲ್ಲಿದ್ದರೆ 5.6 ಕಿ.ಮೀ ಕೇರಳದಲ್ಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು