ಮುಂದಿನ ವಾರ ಬ್ಯಾಂಕ್‌ಗಳಿಗೆ ಸಾಲು ರಜೆ ಇಲ್ಲ: ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ

7

ಮುಂದಿನ ವಾರ ಬ್ಯಾಂಕ್‌ಗಳಿಗೆ ಸಾಲು ರಜೆ ಇಲ್ಲ: ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ

Published:
Updated:

ನವದೆಹಲಿ: ಮುಂದಿನ ವಾರ ಬ್ಯಾಂಕ್‌ಗಳು ಕಾರ್ಯಾಚರಿಸಲಿವೆ. ಈ ಕುರಿತು ಹರಡಿರುವ ವಂದತಿಗಳಲ್ಲಿ ಹುರುಳಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ 6 ದಿನಗಳ ಕಾಲ ಬ್ಯಾಂಕ್‌ಗಳಿಗೆ ರಜೆ ಇದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ ಕಾರಣ ಹಣಕಾಸು ಸಚಿವಾಲಯ ಈ ಕುರಿತು ಸ್ಪಷ್ಟನೆ ನೀಡಿದೆ.

‘ಸೆಪ್ಟೆಂಬರ್‌ ಮೊದಲ ವಾರದಲ್ಲಿ ಬ್ಯಾಂಕ್‌ಗಳು ಎಂದಿನಂತೆ ಕಾರ್ಯಾಚರಿಸಲಿವೆ. ಭಾನುವಾರ (ಸೆಪ್ಟೆಂಬರ್‌ 2) ಮತ್ತು ಎರಡನೇ ಶನಿವಾರ (ಸೆ.8 )ರಂದು ಮಾತ್ರ ರಜೆ ಇರಲಿದೆ’ ಎಂದು ಸಚಿವಾಲಯ ಹೇಳಿದೆ.

‘ಎಟಿಎಂಗಳು ಕಾರ್ಯಾಚರಿಸಲಿವೆ. ಆನ್‌ಲೈನ್‌ ಬ್ಯಾಂಕ್‌ ವ್ಯವಹಾರಗಳಿಗೂ ಯಾವುದೇ ತೊಡಕಿಲ್ಲ’ ಎಂದೂ ಸ್ಪಷ್ಟಪಡಿಸಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !