ನ್ಯಾಯಾಲಯದ ಆವರಣದಲ್ಲೇ ಉತ್ತರ ಪ್ರದೇಶದ ಬಾರ್ ಕೌನ್ಸಿಲ್ ಅಧ್ಯಕ್ಷೆ ಗುಂಡೇಟಿಗೆ ಬಲಿ

ಶುಕ್ರವಾರ, ಜೂನ್ 21, 2019
24 °C

ನ್ಯಾಯಾಲಯದ ಆವರಣದಲ್ಲೇ ಉತ್ತರ ಪ್ರದೇಶದ ಬಾರ್ ಕೌನ್ಸಿಲ್ ಅಧ್ಯಕ್ಷೆ ಗುಂಡೇಟಿಗೆ ಬಲಿ

Published:
Updated:

ಆಗ್ರಾ: ಉತ್ತರ ಪ್ರದೇಶದ ಬಾರ್ ಕೌನ್ಸಿಲ್‌ನ ನೂತನ ಅಧ್ಯಕ್ಷೆ ದರ್ವೇಶ್ ಯಾದವ್ ಅವರನ್ನು ಜತೆಗಿದ್ದ ನ್ಯಾಯವಾದಿ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬುಧವಾರ ನಡೆದಿದೆ. ಆಗ್ರಾ ಸಿವಿಲ್ ಕೋರ್ಟ್ ಆವರಣದಲ್ಲೇ ಈ ಕೃತ್ಯ ನಡೆದಿದೆ.

ಎರಡು ದಿನಗಳ ಹಿಂದೆಯಷ್ಟೇ ದರ್ವೇಶ್ ಯಾದವ್ ಬಾರ್ ಕೌನ್ಸಿಲ್ ಅಧ್ಯಕ್ಷೆಯಾಗಿ ನೇಮಕವಾಗಿದ್ದರು. ನ್ಯಾಯಾಲಯದಲ್ಲಿ ಅಧ್ಯಕ್ಷೆಯ ಸ್ವಾಗತ ಕಾರ್ಯಕ್ರಮದ ವೇಳೆ ನ್ಯಾಯವಾದಿ ಮನೀಶ್ ಎಂಬಾತ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

 45 ನಿಮಿಷಗಳ ಹಿಂದೆಯಷ್ಟೇ ದರ್ವೇಶ್ ಅವರ ಹತ್ಯೆ ನಡೆದಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ನ್ಯಾಯಾಲಯದಲ್ಲಿ ಆಕೆಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯುತ್ತಿದ್ದಾಗ ನ್ಯಾಯವಾದಿ ಮನೀಶ್ ಗುಂಡು ಹಾರಿಸಿದ್ದಾರೆ. ಆಕೆಯ ದೇಹಕ್ಕೆ ಮೂರು ಗುಂಡು ತಾಗಿದೆ. ಆಕೆಯನ್ನು ತಕ್ಷಣವೇ ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು  ಹೆಚ್ಚುವರಿ ಪೊಲೀಸ್ ನಿರ್ದೇಶಕ ಅಜಯ್ ಆನಂದ್ ಹೇಳಿದ್ದಾರೆ.

 ದರ್ವೇಶ್ ಯಾದವ್ ಅವರ ಮೇಲೆ ಗುಂಡು ಹಾರಿಸಿದ ನಂತರ ಮನೀಶ್ ತಮ್ಮ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ ಪೊಲೀಸರು.

ಉತ್ತರ ಪ್ರದೇಶದ ಬಾರ್ ಕೌನ್ಸಿಲ್‌ನಲ್ಲಿ ಅಧ್ಯಕ್ಷೆ ಸ್ಥಾನಕ್ಕೇರಿದ ಮೊದಲ ಮಹಿಳೆ ಆಗಿದ್ದಾರೆ ದರ್ವೇಶ್ ಯಾದವ್.
 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 3

  Sad
 • 0

  Frustrated
 • 8

  Angry

Comments:

0 comments

Write the first review for this !