ಸೋಮವಾರ, ಸೆಪ್ಟೆಂಬರ್ 27, 2021
22 °C

ಕಾಶ್ಮೀರ: ಕಲ್ಲೆಸೆದು ಕರಡಿಯನ್ನು ನದಿಗೆ ಬೀಳಿಸಿದ ಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್‌ ಜಿಲ್ಲೆಯ ದ್ರಾಸ್‌ ಪ್ರದೇಶದಲ್ಲಿ ಕಂದು ಬಣ್ಣದ ಕರಡಿಯೊಂದು ಜನರು ಕಲ್ಲು ತೂರಾಟ ನಡೆಸಿದ ಪರಿಣಾಮ ಬೆಟ್ಟ ಹತ್ತಿ ನಂತರ ಹೊಳೆಗೆ ಜಾರಿ ಬೀಳುತ್ತಿರುವ ದೃಶ್ಯವಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ವಿಡಿಯೊ ಹರಿದಾಡಿದ ಬಳಿಕ ಎಚ್ಚೆತ್ತ ಅಧಿಕಾರಿಗಳು ಕರಡಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಎಂಟು ಸೆಕೆಂಡ್‌ಗಳ ಈ ವಿಡಿಯೊವನ್ನು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯ ಮಾಜಿ ನಿರ್ದೇಶಕ ಮೆಹಮೂದ್‌ ಶಹಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಗ್ರಾಮಸ್ಥರು ಅಟ್ಟಾಡಿಸಿಕೊಂಡು ಬರುವಾಗ ಕರಡಿಯು ಕಡಿದಾದ ಬೆಟ್ಟ ಹತ್ತಲು ಪ್ರಯತ್ನಿಸುತ್ತದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ನಿಯಂತ್ರಣ ತಪ್ಪಿದ ಕರಡಿ ನದಿಗೆ ಉರುತ್ತಿರುವ ದೃಶ್ಯ  ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಗ್ರಾಮಸ್ಥರ ನಡೆಗೆ ಟೀಕೆ ವ್ಯಕ್ತವಾಗಿತ್ತು.

ಕರಡಿಯ ಮೇಲೆ ಕಲ್ಲೆಸೆದವರನ್ನು ಗುರುತಿಸಿ ಬಂಧಿಸಬೇಕು ಎಂದೂ ಹಲವರು ಆಗ್ರಹಿಸಿದ್ದರು.ಈ ಕುರಿತು ತನಿಖೆ ನಡೆಸಲು ಕಾರ್ಗಿಲ್‌ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು