ಭಾನುವಾರ, ಮಾರ್ಚ್ 29, 2020
19 °C

ಪೌರತ್ವ ಕಾಯ್ದೆ ಜಾರಿ: ಬಂಗಾಳ ಬಿಜೆಪಿಯಿಂದ ಅಮಿತ್‌ ಶಾ ಮಾ.1ಕ್ಕೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ಪಶ್ಚಿಮ ಬಂಗಾಳ ಬಿಜೆಪಿ ಘಟಕವು ಗೃಹ ಸಚಿವ ಅಮಿತ್ ಶಾ ಅವರನ್ನು ಮಾರ್ಚ್‌ 1ರಂದು ಸನ್ಮಾನಿಸಲಿದೆ. ಬಳಿಕ ಗೃಹ ಸಚಿವರು ಬೃಹತ್‌ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

 ರ್‍ಯಾಲಿಯು ಶಹೀದ್‌ ಮಿನಾರ್ ಮೈದಾನದಲ್ಲಿ ನಡೆಯಲಿದೆ.

ಅಮಿತ್‌ ಶಾ ಅವರನ್ನು ಸನ್ಮಾನಿಸಲಾಗುವುದು. ಬಳಿಕ ಅವರು ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಿಎಎಗೆ ಇರುವ ಭರ್ಜರಿ ಜನ ಬೆಂಬಲ ವ್ಯಕ್ತವಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಅಮಿತ್‌ ಶಾ ಈ ಮೊದಲು ಪಶ್ಚಿಮ ಬಂಗಾಳಕ್ಕೆ ಅಕ್ಟೋಬರ್‌ 1ರಂದು ಭೇಟಿ ನೀಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸೆಮಿನಾರ್‌ನಲ್ಲಿ ಭಾಗವಹಿಸಿದ್ದರು

ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದು ರಾಷ್ಟ್ರಪತಿಯವರ ಅಂಕಿತದೊಂದಿಗೆ ಕಾಯ್ದೆಯಾಗಿ ಬದಲಾಯಿತು.

ಪೌರತ್ವ ತಿದ್ದುಪಡಿ ಕಾಯ್ದೆಯು ಬಂಗಾಳದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದು, ತೃಣಮೂಲ ಕಾಂಗ್ರೆಸ್ ಈ ಕಾಯ್ದೆಯನ್ನು ಕಟುವಾಗಿ ಟೀಕಿಸಿ ತೀವ್ರವಾಗಿ ವಿರೋಧಿಸಿದ್ದವು , ಅದನ್ನು ಜಾರಿಗೆ ತರಲು ಬಿಜೆಪಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು