ಬುಧವಾರ, ಜನವರಿ 22, 2020
18 °C

ಪಶ್ಚಿಮ ಬಂಗಾಳದಲ್ಲಿಯೇ ಮೊದಲಿಗೆ ಪೌರತ್ವ ಕಾಯ್ದೆ ಜಾರಿ: ದಿಲೀಪ್‌ ಘೋಷ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗುವುದು ,ತೃಣಮೂಲ ಕಾಂಗ್ರೆಸ್ ಅಥವಾ ಮಮತಾ ಬ್ಯಾನರ್ಜಿಗೆ ಈ ಕಾಯ್ದೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಹೇಳಿದ್ದಾರೆ.

ಭಾರತದಲ್ಲಿ ಮೊದಲಿಗೆ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ  ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತ ಬ್ಯಾನರ್ಜಿ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಹೇಳಿದ್ದರು.

ಮಮತ ಬ್ಯಾನರ್ಜಿ ಅವರು ಮತ ಬ್ಯಾಂಕ್ ಕಳೆದುಕೊಳ್ಳುವ ಭಯದಲ್ಲಿದ್ದಾರೆ ಎಂದು ಲೇವಡಿ ಮಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿಯೇ ಮೊದಲಿಗೆ ಜಾರಿಗೆ ತರಲಾಗಿವುದು ಎಂದು ಹೇಳಿದ್ದಾರೆ.

ಅಕ್ರಮವಾಗಿ ನುಸುಳಿರುವವರ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ ಆದರೆ ನಿರಾಶ್ರಿತರಾಗಿರುವ ಹಿಂದೂಗಳ ಬಗ್ಗೆ ಅನುಕಂಪ ಇಲ್ಲ ಎಂದು ಅವರು ಆರೋಪಿಸಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು