ಭಾನುವಾರ, ಜೂಲೈ 12, 2020
29 °C

ವಿಶಾಖಪಟ್ಟಣ | ಅನಿಲ ಸೋರಿಕೆ: ಇಬ್ಬರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶಾಖಪಟ್ಟಣ: ಇಲ್ಲಿಗೆ ಸಮೀಪದ ಪರವಾಡದಲ್ಲಿನ ಔಷಧ ತಯಾರಿಕಾ ಕಂಪನಿಯಲ್ಲಿ ‘ಬೆಂಜಿನ್‌’ ಅನಿಲ ಸೋರಿಕೆಯಿಂದ ಇಬ್ಬರು ಮೃತಪಟ್ಟಿದ್ದು, ನಾಲ್ವರು ಅಸ್ವಸ್ಥರಾಗಿದ್ದಾರೆ. 

ಸೈನರ್‌ ಲೈಫ್‌ ಸೈನ್ಸಸ್‌ ಕಂಪನಿಯ ಒಂದು ಘಟಕದಲ್ಲಿ ಮಂಗಳವಾರ ಬೆಳಿಗ್ಗೆ ಸೋರಿಕೆ ಆಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆಯ ಬಗ್ಗೆ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರು ಜಿಲ್ಲಾಧಿಕಾರಿ ವಿ. ವಿನಯ್‌ ಚಾಂದ್‌ ಅವರಿಂದ  ಮಾಹಿತಿ ಪಡೆದಿದ್ದಾರೆ. ಅಗತ್ಯವಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದು, ಘಟನೆಯ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಅಸ್ವಸ್ಥಗೊಂಡ ಹಿರಿಯ ಉದ್ಯೋಗಿಗಳನ್ನು ಸಮೀಪದ ಗಾಜುವಾಕದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಎರಡು ತಿಂಗಳ ಹಿಂದಷ್ಟೇ ಅನಿಲ ಸೋರಿಕೆಯಿಂದಾಗಿ 12 ಮಂದಿ ಮೃತಪ‍ಟ್ಟು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಕೆಲವು ವರ್ಷಗಳ ಹಿಂದೆ ಇದೇ ಕಂಪನಿ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು