ಗುರುವಾರ , ಜೂನ್ 24, 2021
21 °C

ವದಂತಿಗಳಿಗೆ ಕಿವಿಗೊಡಬೇಡಿ: ಸಿಬಿಎಸ್‌ಇ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪರೀಕ್ಷೆಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಎಚ್ಚರವಹಿಸುವಂತೆ ಸಿಬಿಎಸ್‌ಇ, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಲಹೆ ನೀಡಿದೆ.

‘ನಕಲಿ ವಿಡಿಯೊಗಳು ಮತ್ತು ಸಂದೇಶಗಳನ್ನು ಯೂಟ್ಯೂಬ್‌, ಫೇಸ್‌ಬುಕ್‌, ಟ್ವಿಟರ್‌ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ದಿನಗಳಿಂದ ಹರಿಬಿಡಲಾಗಿದೆ. ವಿದ್ಯಾರ್ಥಿಗಳು, ಪೋಷಕರು, ಶಾಲೆಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಉದ್ದೇಶ ಇದಾಗಿದೆ’ ಎಂದು ಸಿಬಿಎಸ್‌ಇ ತಿಳಿಸಿದೆ.

‘ಸಾರ್ವಜನಿಕರು ಇಂತಹ ಯಾವುದೇ ವದಂತಿಗಳಿಗೆ ಕಿಡಿಗೊಡದೆ ಸುಗಮವಾಗಿ ಪರೀಕ್ಷೆ ನಡೆಸಲು ಸಹಕಾರ ನೀಡಬೇಕು. ವದಂತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದು ‌ಅದು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು