ವಿಂಗ್ ಕಮಾಂಡರ್ ಅಭಿನಂದನ್‍ಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ

ಶನಿವಾರ, ಮಾರ್ಚ್ 23, 2019
34 °C

ವಿಂಗ್ ಕಮಾಂಡರ್ ಅಭಿನಂದನ್‍ಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ

Published:
Updated:

ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ಹೇಳಿದೆ.

ಪಾಕಿಸ್ತಾನದ ಎಫ್-16 ವಿಮಾನವನ್ನು ಬೆನ್ನಟ್ಟಿ ಹೊಡೆದುರುಳಿಸಿದ ಮಿಗ್ 21- ಬೈಸನ್ ಪೈಲಟ್ ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲು ತೀರ್ಮಾನಿಸಿರುವುದಾಗಿ ಮಹಾಸಮಿತಿಯ ಅಧ್ಯಕ್ಷ ಮನೀಂದ್ರ ಜೈನ್ ಹೇಳಿದ್ದಾರೆ.

ಈ ಪುರಸ್ಕಾರ ಪಡೆಯುವ ಮೊದಲ ವ್ಯಕ್ತಿಯಾಗಿದ್ದಾರೆ ಅಭಿನಂದನ್. 

 ₹ 2.51 ಲಕ್ಷ ನಗದು, ಸ್ಮರಣಿಕೆ ಮತ್ತ ಪ್ರಮಾಣ ಪತ್ರವನ್ನು ಒಳಗೊಂಡ ಈ ಪುರಸ್ಕಾರವನ್ನು ಮಹಾವೀರ ಜಯಂತಿ ದಿನ (ಏಪ್ರಿಲ್ 17) ಪ್ರದಾನ ಮಾಡಲಾಗುವುದು ಎಂದು ಮಹಾಸಮಿತಿಯ ನಿರ್ವಾಹಕ ಪರಾಸ್ ಲೊಹಾಡೆ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 13

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !