ಭೀಮಾ–ಕೋರೆಗಾಂವ್: ಆರು ದಿನದೊಳಗೆ ಆರೋಪಪಟ್ಟಿ

7
ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಭೀಮಾ–ಕೋರೆಗಾಂವ್: ಆರು ದಿನದೊಳಗೆ ಆರೋಪಪಟ್ಟಿ

Published:
Updated:
Deccan Herald

ನವದೆಹಲಿ: ಭೀಮಾ–ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾದ ಸಾಮಾಜಿಕ ಹೋರಾಟಗಾರರ ವಿರುದ್ಧ ಪುಣೆಯ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯನ್ನು ಡಿ. 8ರ ಒಳಗಾಗಿ ತನಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಸಾಮಾಜಿಕ ಹೋರಾಟಗಾರರ ವಿರುದ್ಧದ ಆರೋಪಪಟ್ಟಿಯಲ್ಲಿ ಮಹಾರಾಷ್ಟ್ರ ಪೊಲೀಸರು ಮಾಡಿರುವ ಆಪಾದನೆಗಳನ್ನು ಒಮ್ಮೆ ನೋಡಬೇಕಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ನ್ಯಾಯಪೀಠ ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌ ಮತ್ತು ಕೆ.ಎಂ. ಜೋಸೆಫ್‌ ಈ ಪೀಠದಲ್ಲಿದ್ದಾರೆ. ಪ್ರಕರಣದ ವಿಚಾರಣೆಯನ್ನು ಡಿ.11ಕ್ಕೆ ಮುಂದೂಡಿದೆ. ಹಿರಿಯ ವಕೀಲ ಮುಕುಲ್‌ ರೋಹಟಗಿ ಮಹಾರಾಷ್ಟ್ರ ಸರ್ಕಾರದ ಪರ ವಾದ ಮಂಡಿಸುತ್ತಿದ್ದಾರೆ.

ಭೀಮಾ–ಕೋರೆಗಾಂವ್‌ ಹಿಂಸಾಚಾರ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ 90 ದಿನಗಳ ಗಡುವನ್ನು ವಿಸ್ತರಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !