ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣೆ ಪೊಲೀಸರಿಂದ ದೆಹಲಿ ವಿ.ವಿ ಪ್ರಾಧ್ಯಾಪಕ ಮನೆಯಲ್ಲಿ ಶೋಧ

ಭೀಮಾ–ಕೋರೆಗಾಂವ್‌ ಪ್ರಕರಣ
Last Updated 10 ಸೆಪ್ಟೆಂಬರ್ 2019, 19:28 IST
ಅಕ್ಷರ ಗಾತ್ರ

ನವದೆಹಲಿ: ಭೀಮಾ–ಕೋರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಅವರ ಮನೆಯಲ್ಲಿ ಮಂಗಳವಾರ ಶೋಧ ಕಾರ್ಯ ನಡೆಸಿದ್ದಾರೆ.

ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ 6.30 ಗಂಟೆಗೆ ಬಾಬು ಅವರ ಮನೆ ತಲುಪಿದ ಪೊಲೀಸರು, ಆರು ಗಂಟೆಗಳ ಕಾಲ ಶೋಧ ಕಾರ್ಯ ಕೈಗೊಂಡರು. ಮೂರು ಪುಸ್ತಕ, ಲ್ಯಾಪ್‌ಟಾಪ್‌, ದೂರವಾಣಿ ಸೆಟ್‌ ಹಾಗೂ ಹಾರ್ಡ್‌ಡಿಸ್ಕ್‌ಗಳನ್ನು ವಶಪಡಿಸಿಕೊಂಡರು.

‘ಬಾಬು ಅವರನ್ನು ಬಂಧಿಸಿಲ್ಲ. ಶೋಧ ಕಾರ್ಯ ಕೈಗೊಳ್ಳಲು ಏನು ಕಾರಣ ಎಂಬುದನ್ನು ವಿವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ತಂತ್ರ: ‘ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅವರು ನನ್ನನ್ನು ಬಂಧಿಸದೇ ಇರಬಹುದು. ಆದರೆ, ಈಗಿನ ಕ್ರಮವೇ ನನಗೆ ಶಿಕ್ಷೆಯಂತಾಗಿದೆ’ ಎಂದು ಬಾಬು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT