ಭೀಮಾ–ಕೊರೆಗಾಂವ್ ಹಿಂಸಾಚಾರ ಪ್ರಕರಣ: ಹೋರಾಟಗಾರರ ಗೃಹಬಂಧನ 12ರವರೆಗೆ ವಿಸ್ತರಣೆ

7

ಭೀಮಾ–ಕೊರೆಗಾಂವ್ ಹಿಂಸಾಚಾರ ಪ್ರಕರಣ: ಹೋರಾಟಗಾರರ ಗೃಹಬಂಧನ 12ರವರೆಗೆ ವಿಸ್ತರಣೆ

Published:
Updated:
ಸುಧಾ ಭಾರದ್ವಾಜ್, ಗೌತಮ್ ನವಾಲಖಾ, ವರ್ನಾನ್ ಗೋನ್ಸಾಲ್ವೆಸ್, ಅರುಣ್ ಫೆರೇರಾ, ವರವರರಾವ್

ನವದೆಹಲಿ: ಭೀಮಾ–ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐವರು ಸಾಮಾಜಿಕ ಹೋರಾಟಗಾರರ ಗೃಹಬಂಧನವನ್ನು ಸುಪ್ರೀಂ ಕೋರ್ಟ್ ಇದೇ 12ರವರೆಗೆ ವಿಸ್ತರಿಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಪುಣೆ ಪೊಲೀಸರು ವಶಪಡಿಸಿಕೊಂಡಿರುವ ದಾಖಲೆಗಳನ್ನು ಪರಿಶೀಲಿಸಿದರೆ ಬಂಧಿತರು ದೇಶಕ್ಕೆ ಎಂಥ ಹಾನಿ ಮಾಡುತ್ತಿದ್ದರು ಎಂಬುದು ನ್ಯಾಯಾಲಯಕ್ಕೆ ಅರಿವಾಗುತ್ತದೆ. ರೊಮಿಲಾ ಥಾಪರ್ ಮತ್ತು ಇತರ ಅರ್ಜಿದಾರರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದ್ದರು.

ಗೃಹ ಬಂಧನದ ಅವಧಿಯನ್ನು ಗುರುವಾರ ವಿಸ್ತರಿಸಿದ ಸುಪ್ರೀಂ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಪತ್ರಿಕಾಗೋಷ್ಠಿ ನಡೆಸಿರುವುದನ್ನು ಕಟುವಾಗಿ ಆಕ್ಷೇಪಿಸಿತು. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಪೊಲೀಸರು ಸೂಕ್ಷ್ಮವಾಗಿ ವರ್ತಿಸಬೇಕು. ಈ ಕುರಿತು ಸರ್ಕಾರ ಪೊಲೀಸರಿಗೆ ಅಗತ್ಯ ಸೂಚನೆ ನೀಡಬೇಕು ಎಂದು ಹೇಳಿತು.

‘ಪ್ರಕರಣದ ವಿವರಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು’ ಎನ್ನುವ ಮನವಿಯನ್ನು ತಳ್ಳಿಹಾಕಿತು.

ಐವರು ಹೋರಾಟಗಾರರ ಬಂಧನವನ್ನು ಆಕ್ಷೇಪಿಸಿ ಇತಿಹಾಸ ತಜ್ಞೆ ರೊಮಿಲಾ ಥಾಪರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಡೆಸುತ್ತಿದೆ.

ನಕ್ಸಲರ ಜತೆ ಸಂಪರ್ಕ ಹೊಂದಿದ್ದಾರೆ ಎನ್ನುವ ಆರೋಪದಡಿ ಪುಣೆ ಪೊಲೀಸರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ ಐವರು ಸಾಮಾಜಿಕ ಹೋರಾಟಗಾರರಾದ ವರವರ ರಾವ್, ಸುಧಾ ಭಾರದ್ವಾಜ್, ಅರುಣ್ ಫೆರಾರಿಯಾ, ಗೌತಮ್ ನವಾಲಖ ಮತ್ತು ವರ್ನನ್ ಗೋನ್ಸಾಲ್ವೀಸ್ ಅವರನ್ನು ಬಂಧಿಸಿದ್ದರು. ಸುಪ್ರಿಂಕೋರ್ಟ್ ಆದೇಶದ ಅನ್ವಯ ಅವರೆಲ್ಲರೂ ಈಗ ಗೃಹಬಂಧನದಲ್ಲಿದ್ದಾರೆ.

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !