ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಸಂಪುಟ ವಿಸ್ತರಣೆ-ಮೂವರು ನೂತನ ಸಚಿವರಿಗೆ ಸಂಜೆ ಪ್ರಮಾಣ ವಚನ

Last Updated 2 ಜೂನ್ 2019, 7:20 IST
ಅಕ್ಷರ ಗಾತ್ರ

ಬಿಹಾರ:ಜೆಡಿಯು ಪಕ್ಷದ ನೇತಾರ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌‌ಕುಮಾರ್ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು ಭಾನುವಾರ ಮೂವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜೆಡಿಯು ಪಕ್ಷದ ನೀರಜ್ ಕುಮಾರ್, ಶ್ಯಾಮ್ ರಜಕ್ ಹಾಗೂ ಅಶೋಕ್ ಚೌದರಿ ಸಚಿವ ಪದವಿಗೇರಲಿದ್ದಾರೆ. ಬಿಹಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ಮೂವರು ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇತ್ತೀಚೆಗೆ ನಿತೀಶ್ ಕುಮಾರ್ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ಮುಂದೆಂದೂ ಮೋದಿಯವರ ಜೊತೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT