ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಪ್ರವಾಹ: 25 ಮಂದಿ ಸಾವು, ಪಟ್ನಾದ ಆಸ್ಪತ್ರೆಯೊಳಗೆ ನುಗ್ಗಿದ ಮಳೆನೀರು

Last Updated 29 ಸೆಪ್ಟೆಂಬರ್ 2019, 11:09 IST
ಅಕ್ಷರ ಗಾತ್ರ

ಪಟ್ನಾ: ಕಳೆದ ಮೂರು ದಿನಗಳಿಂದ ಬಿಹಾರದಾದ್ಯಂತ ಭಾರೀ ಮಳೆಯಾಗುತ್ತಿದ್ದು 25ಮಂದಿ ಸಾವಿಗೀಡಾಗಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು 12 ರೈಲುಗಳನ್ನು ರದ್ದು ಮಾಡಲಾಗಿದೆ.

ಭಗಲ್‌ಪುರ್ ಮತ್ತು ಗಯಾದಲ್ಲಿ ಒಬ್ಬ ವ್ಯಕ್ತಿ, ಪಟ್ನಾದಲ್ಲಿ5 ಮತ್ತು ಕೈಮೂರ್‌ನಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಬೆಗುಸರೈ, ಜಮೂಯಿ, ಸೀತಾಮರ್ಹಿ ಮತ್ತು ಸಮಸ್ತಿಪುರ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

12 ರೈಲುಗಳನ್ನು ರದ್ದು ಮಾಡಲಾಗಿದ್ದು, 7 ರೈಲುಗಳನ್ನು ತಾತ್ಕಾಲಿಕ ಸ್ಥಗಿತಮಾಡಲಾಗಿದೆ. 20 ರೈಲುಗಳು ಬೇರೆ ಮಾರ್ಗವಾಗಿ ಸಂಚರಿಸುತ್ತಿದೆ ಎಂದು ಈಸ್ಟ್ ಸೆಂಟ್ರಲ್ ರೈಲ್ವೇ ಅಧಿಕಾರಿಗಳು ಹೇಳಿದ್ದಾರೆ.

ಇಲ್ಲಿನ ಭಗಾಲ್ಪುರ್‌ನಲ್ಲಿ ಗೋಡೆಯೊಂದು ಕುಸಿದು ಬಿದ್ದು 3 ಮಂದಿ ಸಾವಿಗೀಡಾಗಿದ್ದಾರೆ. ಹಲವಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಎಎನ್‌ಐ ಸುದ್ದಿಸಂಸ್ಥೆ ಭಾನುವಾರ ವರದಿ ಮಾಡಿದೆ,
ರಾಜ್ಯ ರಾಜಧಾನಿ ಪಟ್ನಾದಲ್ಲಿ ಪ್ರವಾಹವುಂಟಾಗಿದ್ದು ರಕ್ಷಣಾ ಕಾರ್ಯಗಳಿಗಾಗಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯನ್ನು (ಎನ್‌ಡಿಆರ್‌ಎಫ್) ನಿಯೋಜಿಸಲಾಗಿದೆ.

ಇಲ್ಲಿನ ಭಗಾಲ್ಪುರ್‌ನಲ್ಲಿ ಗೋಡೆಯೊಂದು ಕುಸಿದು ಬಿದ್ದು 3 ಮಂದಿ ಸಾವಿಗೀಡಾಗಿದ್ದಾರೆ. ಹಲವಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಎಎನ್‌ಐ ಸುದ್ದಿಸಂಸ್ಥೆ ಭಾನುವಾರ ವರದಿ ಮಾಡಿದೆ.

ಪಟ್ನಾದ ಹಲವಾರು ಆಸ್ಪತ್ರೆಗಳೊಳಗೆ ನೀರು ನುಗ್ಗಿದೆ. ನಲಂದಾ ವೈದ್ಯಕೀಯ ಕಾಲೇಜು ಮತ್ತು ಗರ್ದಾನಿಭಗ್ ಆಸ್ಪತ್ರೆಯೊಳಗೆ ಮಳೆ ನೀರು ನುಗ್ಗಿದೆ . ಆಸ್ಪತ್ರೆಯೊಳಗೆ ಆಕ್ಸಿಜನ್ ಸಿಲಿಂಡರ್ ಮತ್ತು ಇತರ ಅಗತ್ಯವಸ್ತುಗಳನ್ನು ಪೂರೈಸುವುದಕ್ಕಾಗಿ ತಳ್ಳುಗಾಡಿಯನ್ನು ಬಳಕೆ ಮಾಡಲಾಗುತ್ತಿದೆ. ಮಳೆ ನೀರು ತುಂಬಿ ಹರಿಯುತ್ತಿರುವುದರಿಂದ ಆ್ಯಂಬುಲೆನ್ಸ್ ಕೂಡಾ ಕಾರ್ಯಾಚರಣೆ ನಡೆಸುತ್ತಿಲ್ಲ. ಶುಕ್ರವಾರದಿಂದ ಇಲ್ಲಿ ಮಳೆ ಸುರಿಯುತ್ತಿದ್ದು ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಂಗಳವಾರದವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆಯಿಂದಾಗಿ ಪಟ್ನಾ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ರಾಜೇಂದ್ರ ನಗರ ಮತ್ತು ಎಸ್‌.ಕೆ.ಪುರಿ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ.

ಶನಿವಾರ ಬೆಳಗ್ಗೆದರಭಂಗಾ- ಸಮಸ್ತಿಪುರ್ ರೈಲು ರದ್ದುಗೊಳಿಸಲಾಗಿತ್ತು. ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ವಿಡಿಯೊ ಸಂವಾದ ನಡೆಸಿ ಪ್ರವಾಹ ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT