ಮಂಗಳವಾರ, ಫೆಬ್ರವರಿ 25, 2020
19 °C

ಬಿಹಾರ: ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಬಕ್ಸರ್ (ಬಿಹಾರ): ಹೈದರಾಬಾದ್‌ನಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆಯಂತೆಯೇ ಬಿಹಾರದ ಬಕ್ಸರ್‌ ಜಿಲ್ಲೆಯ ಕುಕುಢ ಗ್ರಾಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಗುಂಡಿಟ್ಟು ಕೊಂದು, ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪಟ್ನಾದಿಂದ 100 ಕಿ.ಮೀ ದೂರವಿರುವ ಬಕ್ಸರ್‌ ಜಿಲ್ಲೆಯ ಕುಕುಢ ಹಳ್ಳಿಯಲ್ಲಿ ಸೋಮವಾರ ರಾತ್ರಿ ಈ ಕೃತ್ಯ ನಡೆದಿದ್ದು, ಮಂಗಳವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಸುಟ್ಟು ಕರಕಲಾದ ಬಾಲಕಿಯ ದೇಹ ದೊರೆತಿದೆ ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಸತೀಶ್ ಕುಮಾರ್  ಮಾಹಿತಿ ನೀಡಿದ್ದಾರೆ. 

ಬಾಲಕಿಯ ವಯಸ್ಸು ಮತ್ತು ಗುರುತು ಇನ್ನೂ ಪತ್ತೆ ಹಚ್ಚಲಾಗಿಲ್ಲ. ಬಾಲಕಿ ಅಪ್ರಾಪ್ತಳೋ, ಪ್ರಾಪ್ತಳೋ ಅನ್ನುವುದು ಶವದ ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಲಿದೆ ಎಂದು ಅವರು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು