ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಬಾಲಕಿಯಲ್ಲಿ ಕೊರೊನಾವೈರಸ್ ಸೋಂಕು ಲಕ್ಷಣ ಪತ್ತೆ

Last Updated 27 ಜನವರಿ 2020, 6:16 IST
ಅಕ್ಷರ ಗಾತ್ರ

ನವದೆಹಲಿ: ಚೀನಾದಿಂದ ಬಿಹಾರಕ್ಕೆ ಹಿಂದಿರುಗಿದ ಬಾಲಕಿಯೊಬ್ಬಳಲ್ಲಿಕೊರೊನಾವೈರಸ್‌ಸೋಂಕು ಲಕ್ಷಣಗಳು ಪತ್ತೆಯಾಗಿವೆ. ಆಕೆಯನ್ನು ಚಾಪ್ರಾ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ವಿಷಯ ನಮ್ಮ ಗಮನಕ್ಕೆ ಬಂದಿದೆ. ಆಕೆಯನ್ನು ತಕ್ಷಣ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗುವುದು’ ಎಂದು ಪಾಟ್ನಾ ವೈದ್ಯಕೀಯ ಕಾಲೇಜಿನ ಅಧೀಕ್ಷಕರು ಎಎನ್‌ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

ಚೀನಾದಿಂದ ಹಿಂದಿರುಗಿದ ರಾಜಸ್ಥಾನದ ವೈದ್ಯರೊಬ್ಬರಲ್ಲಿಯೂ ಕೊರೊನಾವೈರಸ್ ಪತ್ತೆಯಾಗಿದೆ. ರೋಗಿಯಿಂದ ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ರವಾನಿಸಲಾಗಿದೆ ಎಂದು ರಾಜಸ್ಥಾನ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಭಾನುವಾರದವರೆಗೆ ದೇಶದ ವಿವಿಧೆಡೆ 137 ವಿಮಾನಗಳಿಂದ ಬಂದಿಳಿದ 29,700ಕ್ಕೂ ಹೆಚ್ಚು ಜನರನ್ನು ಕೊರೊನಾವೈರಸ್‌ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಯಾರೊಬ್ಬರಲ್ಲೂ ಸೋಂಕು ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ 100ಕ್ಕೂ ಹೆಚ್ಚು ಜನರನ್ನು ನಿಗಾವಣೆಯಲ್ಲಿ ಇರಿಸಲಾಗಿದೆ. ಕೊರೊನಾವೈರಸ್ ಸೋಂಕು ನಿರ್ವಹಣೆಗೆ ದೇಶ ಎಷ್ಟರಮಟ್ಟಿಗೆ ಸಿದ್ಧವಾಗಿದೆ ಎಂಬುದರ ಕುರಿತುಪ್ರಧಾನಿ ಕಚೇರಿಯು ಶನಿವಾರ ಪರಿಶೀಲನೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT