ಲೈಂಗಿಕ ದೌರ್ಜನ್ಯ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ಗೃಹ ಸಚಿವ

7

ಲೈಂಗಿಕ ದೌರ್ಜನ್ಯ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ಗೃಹ ಸಚಿವ

Published:
Updated:

ನವದೆಹಲಿ : ಬಿಹಾರ ಮತ್ತು ಉತ್ತರ ಪ್ರದೇಶದ ಪುನರ್ವಸತಿ ಕೇಂದ್ರಗಳಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದವು. ಈ ಘಟನೆ ನಾಚಿಗೇಡು ಎಂದ ಗೃಹ ಸಚಿವ ರಾಜನಾಥ್‌ ಸಿಂಗ್‌, ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. 

ಪ್ರಕರಣ ಕುರಿತು ರಾಜ್ಯ ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕರ ಮಟ್ಟದ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

ಸದನ ಸಮಿತಿಗೆ ಖರ್ಗೆ ಒತ್ತಾಯ: ‘ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ನಡೆದಿರುವ ಪ್ರಕರಣಗಳ ತನಿಖೆಗೆ ಸದನ ಸಮಿತಿ ರಚಿಸಬೇಕು ಎಂದು ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು. ಸಮಿತಿಯು ಎಲ್ಲ ರಾಜ್ಯಗಳಿಗೂ ಭೇಟಿ ನೀಡಿ, ಇಂತಹ ಘಟನೆಗಳು ಯಾಕೆ ನಡೆಯುತ್ತವೆ ಎಂಬುದನ್ನು ಪತ್ತೆ ಹಚ್ಚಬೇಕು’ ಎಂದು ಆಗ್ರಹಿಸಿದರು. 

ಸಚಿವೆ ಹೇಳಿಕೆ: ಪುನರ್ವಸತಿ ಕೇಂದ್ರವನ್ನು ಮುಚ್ಚುವಲ್ಲಿ ದೆವರಿಯ ಜಿಲ್ಲಾಡಳಿತದ ವೈಫಲ್ಯವನ್ನು ಉತ್ತರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೀಟಾ ಬಹುಗುಣ ಜೋಷಿ ಒಪ್ಪಿಕೊಂಡಿದ್ದಾರೆ. 

ಮುಚ್ಚುವ ಆದೇಶ ಇದ್ದರೂ, ಪುನರ್ವಸತಿ ಕೇಂದ್ರ ಒಂದು ವರ್ಷ ಕಾಲ ಕೆಲಸ ಮಾಡಲು ಅಧಿಕಾರಿಗಳು ಅನುವು ಮಾಡಿಕೊಟ್ಟಿದ್ದರು ಎಂದು ಅವರು ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !