ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ 19 ಮಂದಿ ಮೇಲಿನ ಆರೋಪ ಸಾಬೀತು

Last Updated 20 ಜನವರಿ 2020, 10:16 IST
ಅಕ್ಷರ ಗಾತ್ರ

ನವದೆಹಲಿ:2018ರಲ್ಲಿ ಬಿಹಾರದ ಮುಜಫ್ಫರ್‌ಪುರದ ಆಶ್ರಯ ನಿವಾಸದಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಬ್ರಜೇಶ್ ಠಾಕೂರ್ (ಆಶ್ರಯ ನಿವಾಸ ನಡೆಸುತ್ತಿದ್ದ ಮಾಜಿ ಶಾಸಕ) ಸೇರಿದಂತೆ 19 ಜನರ ಮೇಲಿನ ಆರೋಪ ಸಾಬೀತಾಗಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯವು 19 ಜನರನ್ನು ಅಪರಾಧಿಗಳೆಂದು ಪರಿಗಣಿಸಿ ತೀರ್ಪು ನೀಡಿದೆ. 19 ಅಪರಾಧಿಗಳಲ್ಲಿ 8 ಮಹಿಳೆಯರಿದ್ದು, 12 ಪುರುಷರು ಸೇರಿದ್ದಾರೆ.

ಆಶ್ರಯ ನಿವಾಸದಲ್ಲಿರುವ ಬಾಲಕಿಯರ ಜತೆ ಮಾತುಕತೆ ನಡೆಸಿದ್ದ ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ 2018ರಲ್ಲಿ ಮೇನಲ್ಲಿ ವರದಿಯೊಂದನ್ನು ಸಲ್ಲಿಸಿತ್ತು. ಆ ವರದಿಯಿಂದ ಆಶ್ರಯ ನಿವಾಸದಲ್ಲಿದ್ದ ಬಾಲಕಿಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅತ್ಯಾಚಾರ ನಡೆದಿರುವ ಬಗ್ಗೆ ವೈದ್ಯಕೀಯ ಪರೀಕ್ಷೆಯಿಂದ ದೃಢವಾಗಿತ್ತು.

ಈ ಪ್ರಕರಣವು ದೇಶದಾದ್ಯಂತ ಸಂಚಲನ ಉಂಟು ಮಾಡಿ, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಪ್ರತಿಪಕ್ಷಗಳಿಂದ ತೀವ್ರ ಒತ್ತಡ ಎದುರಾಗಿದ್ದ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT