ಶುಕ್ರವಾರ, ಫೆಬ್ರವರಿ 21, 2020
17 °C

ಕನ್ಹಯ್ಯಾ ಕುಮಾರ್ ಬೆಂಗಾವಲು ವಾಹನದ ಮೇಲೆ ಮತ್ತೆ ಕಲ್ಲು ತೂರಾಟ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಟ್ನಾ (ಬಿಹಾರ): ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ. ನಾಲ್ಕು ದಿನಗಳಲ್ಲಿ ಅವರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. 

ಬಿಹಾರದ ಸುಪಾಲ್‌ ಜಿಲ್ಲೆಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರು, ಸಹಾರ್ಸ ಕಡೆಗೆ ತೆರಳುತ್ತಿದ್ದಾಗ ದಾಳಿ ನಡೆದಿದೆ. ಸ್ಥಳೀಯ ಮಾರುಕಟ್ಟೆಯ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಅವರ ವಾಹನ ಜಖಂ ಆಗಿದೆ. 

ಘಟನೆಯಲ್ಲಿ ಕನ್ಹಯ್ಯಾ ಕುಮಾರ್‌ ಅವರಿಗೆ ಗಾಯಗಳಾಗಿವೆ ಎಂದು ಎಎನ್‌ಐ ವರದಿ ಮಾಡಿದೆ. 

ನಾಲ್ಕು ದಿನಗಳ ಹಿಂದೆ ಚಾಪ್ರಾ–ಸಿವಾನ್‌ ಮಾರ್ಗದ ಕೋಪಾ ಬಜಾರ್‌ ಬಳಿ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆದಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು