ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಲ್ಕಿಸ್‌ ಬಾನು ಪ್ರಕರಣ: ₹50 ಲಕ್ಷ ಪರಿಹಾರ, ಉದ್ಯೋಗ ನೀಡಿ

ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
Last Updated 23 ಏಪ್ರಿಲ್ 2019, 19:58 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2002ರ ಗೋಧ್ರಾ ಗಲಭೆ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಿಲ್ಕಿಸ್‌ ಬಾನೊಗೆ ₹50 ಲಕ್ಷ ಪರಿಹಾರ, ಉದ್ಯೋಗ ಹಾಗೂ ವಸತಿ ಒದಗಿಸಬೇಕು ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಪ್ರಕರಣ ಕುರಿತುಸರ್ಕಾರದ ಪರ ವಕೀಲರು,ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ, ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸಂಜೀವ್ ಖನ್ನಾ ಅವರನ್ನೊಳ ಗೊಂಡನ್ಯಾಯಪೀಠಕ್ಕೆಮಾಹಿತಿ ಸಲ್ಲಿಸಿದರು. ‘ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅವರ ಪಿಂಚಣಿ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಬಾಂಬೆ ಹೈಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿದ್ದ ಐಪಿಎಸ್‌ ಅಧಿಕಾರಿಗೆ ಎರಡು 2 ಹಿಂಬಡ್ತಿ ನೀಡಲಾಗಿದೆ’ ಎಂದು ಹೇಳಿದರು.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಈ ಮೊದಲು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಈ ಹಿಂದೆ ರಾಜ್ಯ ಸರ್ಕಾರ ನೀಡಲು ಮುಂದಾಗಿದ್ದ ₹5 ಲಕ್ಷ ಪರಿಹಾರ ಸ್ವೀಕರಿಸಲು ನಿರಾಕರಿಸಿದ್ದ ಬಾನೊ, ಹೆಚ್ಚಿನ ಪರಿಹಾರ ನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗೋಧ್ರಾ ಗಲಭೆ ಬಳಿಕ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಸಂಬಂಧ, 11 ಜನ ತಪ್ಪಿತಸ್ಥರು ಎಂದು2008ರ ಜ.21ರಂದುವಿಶೇಷ ನ್ಯಾಯಾಲಯ ತೀರ್ಪು ನೀಡಿ ಅಪರಾಧಿಗಳಿಗೆ ಜೀವಾ
ವಧಿ ಶಿಕ್ಷೆ ವಿಧಿಸಿತ್ತು. ಪೊಲೀಸರು, ವೈದ್ಯರು ಸೇರಿದಂತೆ ಉಳಿದವರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT