ಶನಿವಾರ, ಜೂನ್ 6, 2020
27 °C
ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಗೇಟ್ಸ್‌

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತದ ಪಾತ್ರ ಮಹತ್ವದ್ದು: ಬಿಲ್ ಗೇಟ್ಸ್‌

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Narendra Modi and Bil gates

ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕದ ವಿರುದ್ಧದ ಹೋರಾಟಕ್ಕೆ ಜಾಗತಿಕ ಸಹಕಾರ ಅಗತ್ಯ ಎಂದಿರುವ ಮೈಕ್ರೊಸಾಫ್ಟ್‌ ಸಹ ಸ್ಥಾಪಕ ಬಿಲ್‌ ಗೇಟ್ಸ್‌, ಈ ವಿಚಾರವಾಗಿ ಮಾತುಕತೆ ನಡೆಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

‘ಮಾತುಕತೆ ನಡೆಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಸಾಂಕ್ರಾಮಿಕದ ವಿರುದ್ಧದ ಹೋರಾಟಕ್ಕೆ ಜಾಗತಿಕ ಸಹಕಾರ ಅಗತ್ಯ. ಸೋಂಕಿನ ಸಾಮಾಜಿಕ, ಆರ್ಥಿಕ ಪರಿಣಾಮಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಪಾತ್ರ ಮಹತ್ವದ್ದು. ಇದು ಎಲ್ಲರಿಗೂ ಲಸಿಕೆ, ಪರೀಕ್ಷೆ, ಚಿಕಿತ್ಸೆ ನೀಡಲು ಅನುವು ಮಾಡಿಕೊಡಲಿದೆ’ ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ಧದ ಜಾಗತಿಕ ಹೋರಾಟಕ್ಕೆ ಸಂಬಂಧಿಸಿ ಮೋದಿಯವರು ಗುರುವಾರ ಬಿಲ್‌ ಗೇಟ್ಸ್‌ ಜತೆ ಮಾತುಕತೆ ನಡೆಸಿದ್ದರು. ಭಾರತದ ಸಾಮರ್ಥ್ಯ ಮತ್ತು ಅದನ್ನು ಜಗತ್ತಿನ ಪ್ರಯೋಜನಕ್ಕೆ ಹೇಗೆ ಉತ್ತಮವಾಗಿ ಬಳಸಿಕೊಳ್ಳಬಹುದು ಎಂಬ ಕುರಿತು ಚರ್ಚಿಸಿದ್ದರು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು