ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂ ನರೇಂದ್ರ ಮೋದಿ ಸಿನಿಮಾ ಮೇ 24ರಂದು ಬಿಡುಗಡೆ

Last Updated 3 ಮೇ 2019, 6:11 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಜೀವನವನ್ನು ಆಧರಿಸಿದ‘ಪಿಎಂ ನರೇಂದ್ರ ಮೋದಿ’ ಸಿನಿಮಾ ಲೋಕಸಭಾ ಚುನಾವಣೆ ಫಲಿತಾಂಶದ ಮರುದಿನ ಮೇ 24ಕ್ಕೆ ಬಿಡುಗಡೆಯಾಗಲಿದೆ.

ಸಿನಿಮಾ ಬಿಡುಗಡೆಗೆ ಇದ್ದ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದ್ದು ಸಿನಿಮಾ ಮೇ 24ರಂದು ಭಾರತ ಸೇರಿದಂತೆ ವಿದೇಶಗಳಲ್ಲೂ ಬಿಡುಗಡೆಯಾಗಲಿದೆ ಎಂದು‘ಪಿಎಂ ನರೇಂದ್ರ ಮೋದಿ’ ಸಿನಿಮಾದ ನಿರ್ಮಾಪಕ ಸಂದೀಪ್‌ ಸಿಂಗ್ ಟ್ವೀಟ್‌ ಮಾಡಿದ್ದಾರೆ.

ಲೋಕಸಭೆಯ ಮೊದಲ ಹಂತದ ಮತದಾನ ನಡೆಯುವ ದಿನದಂದೇ ಪಿ.ಎಂ. ಮೋದಿ ಚಲನಚಿತ್ರವು ಬಿಡುಗಡೆಯಾಗಬೇಕಿತ್ತು. ಆದರೆ ಅದಕ್ಕೂ ಒಂದು ದಿನ ಮೊದಲಷ್ಟೇ ಆಯೋಗವು ಮೋದಿ ಸಿನಿಮಾಗೆ ನಿರ್ಬಂಧ ಹೇರಿತ್ತು. ನಿರ್ಮಾಪಕ ಸಂದೀಪ್‌ ಸಿಂಗ್‌ ಸಿನಿಮಾ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್‌ ಚುನಾವಣಾ ಆಯೋಗದ ನಿಲುವನ್ನು ಎತ್ತಿ ಹಿಡಿದು ಸಿನಿಮಾ ಬಿಡುಗಡೆ ತಡೆ ನೀಡಿತ್ತು.

ಈ ಚಲನಚಿತ್ರವು ಮತದಾರರ ಮೇಲೆ ಪ್ರಭಾವ ಬೀರಲಿದೆ ಎಂದು ವಿರೋಧ ಪಕ್ಷಗಳು ಚುನಾವಣಾ ಆಯೋಗದ ಮೊರೆ ಹೋಗಿದ್ದವು. ರಾಜಕೀಯ ವ್ಯಕ್ತಿಗಳು, ಪಕ್ಷಗಳು ಮತ್ತು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳಿಗೆ ಸಂಬಂಧಿಸಿದ ಚಲನಚಿತ್ರಗಳನ್ನು ಚುನಾವಣೆ ಮುಗಿಯುವವರೆಗೆ ಪ್ರದರ್ಶನ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ನಿರ್ಮಾಪಕರಿಗೆ ಸೂಚನೆ ನೀಡಿತ್ತು.

ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಮೇ 19ಕ್ಕೆ ಮುಗಿಯಲಿದೆ. 24ರಂದು ಸಿನಿಮಾ ಬಿಡುಗಡೆ ಮಾಡಲಿದ್ದು ಕೇವಲ ನಾಲ್ಕು ದಿನಗಳಲ್ಲಿ ಸಿನಿಮಾದ ಪ್ರಚಾರ ಕಾರ್ಯ ನಡೆಸಬೇಕಿದೆ ಎಂದು ಸಂದೀಪ್‌ ಸಿಂಗ್ ಹೇಳಿದ್ದಾರೆ.

ನಟ ವಿವೇಕ್ ಒಬೆರಾಯ್ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಮಂಗ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT