ಗುರುವಾರ , ಫೆಬ್ರವರಿ 27, 2020
19 °C

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ. 

ಫೆ.8ರಂದು 70 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಹಾಲಿ ಶಾಸಕ ವಿಜೇಂದರ್‌ ಗುಪ್ತಾ, ಮಾಜಿ ಮೇಯರ್‌ಗಳಾದ ರವೀಂದರ್‌ ಗು‍ಪ್ತಾ ಮತ್ತು ಯೋಗೇಂದರ್‌ ಚಾಂದೋಲಿಯಾ ಟಿಕೆಟ್‌ ಗಿಟ್ಟಿಸಿದ್ದಾರೆ.

ಅಭ್ಯರ್ಥಿಗಳ‍ಪಟ್ಟಿಯನ್ನು ದೆಹಲಿ ಘಟಕದ ಅಧ್ಯಕ್ಷ ಮನೋಜ್‌ ತಿವಾರಿ ಬಿಡುಗಡೆ ಮಾಡಿದ್ದು, ಮಾಜಿ ಎಎಪಿ ಶಾಸಕ ಕಪಿಲ್‌ ಮಿಶ್ರಾ ಮತ್ತು ಪರಿಶಿಷ್ಟ ವರ್ಗಗಳ 11 ಅಭ್ಯರ್ಥಿಗಳು, ನಾಲ್ವರು ಮಹಿಳೆಯರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ವಿರುದ್ಧ ಕಣಕ್ಕಿಳಿಸುವ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು