ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾಗೆ ಎಚ್‌1ಎನ್‌1: ಏಮ್ಸ್‌ಗೆ ದಾಖಲು

Last Updated 16 ಜನವರಿ 2019, 17:23 IST
ಅಕ್ಷರ ಗಾತ್ರ

ನವದೆಹಲಿ: ಎಚ್‌1ಎನ್‌1ದಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಾಗಿದ್ದಾರೆ.

ಉಸಿರಾಟ ತೊಂದರೆ ಮತ್ತು ಎದೆ ನೋವುಕಾಣಿಸಿಕೊಂಡಿದ್ದರಿಂದ ಶಾ ಏಮ್ಸ್‌ಗೆ ತಪಾಸಣೆಗೆ ತೆರಳಿದ್ದರು. ಅಲ್ಲಿ ಅವರಿಗೆ ಎಚ್‌1ಎನ್‌1 ಇರುವುದು ಪತ್ತೆಯಾಗಿದೆ.

ಸದ್ಯ ಅವರನ್ನು ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿದ್ದು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಮೂಗು ಕಟ್ಟಿ ಉಸಿರಾಟ ತೊಂದರೆಯಿಂದ ಸೋಮವಾರ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಅವರನ್ನು ತುರ್ತು ನಿಗಾ ಘಟಕದಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT