ಭಾನುವಾರ, ಸೆಪ್ಟೆಂಬರ್ 27, 2020
21 °C

ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿ ಪ್ರಹಾರ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ಪೊಲೀಸರ ಪ್ರಧಾನ ಕಾರ್ಯಾಲಯ ಲಾಲ್‌ಬಜಾರ್‌ಗೆ ಪ್ರತಿಭಟನಾ ರ‍್ಯಾಲಿ ನಡೆಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಪ್ರತಿಭಟನಾ ಮೆರವಣಿಗೆ ನಡೆಸಬೇಡಿ ಎಂದು ಪೊಲೀಸರು ಪದೇ ಪದೇ ಹೇಳಿದ್ದರೂ ಅದನ್ನು ಲೆಕ್ಕಿಸದೆ ಬಿಜೆಪಿ ಕಾರ್ಯಕರ್ತರು ಮುನ್ನುಗ್ಗಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಅಶ್ರುವಾಯು ಮತ್ತು ಜಲಫಿರಂಗಿ ಬಳಸಿ ಗುಂಪನ್ನು ಚದುರಿಸಿದ್ದಾರೆ.

ಶನಿವಾರ ಬಶೀರ್‌ಹತ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಹತ್ಯೆಗೀಡಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಹಲವಾರು ಕಾರ್ಯಕರ್ತರು ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಈ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.

ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವಿನ ಜಟಾಪಟಿ ಇದೀಗ ಮತ್ತಷ್ಟು ಬಿಗಡಾಯಿಸಿದ್ದು, ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆಗೆ ತಡೆಯೊಡ್ಡಲು ಬೆಳಗ್ಗಿನಿಂದಲೇ ಪೊಲೀಸರು ಸಜ್ಜಾಗಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ನಿಲ್ಲದ ಹಿಂಸಾಚಾರ: ಸಾವಿನ ಸರಣಿಗೆ ಮತ್ತೆ ಮೂವರ ಸೇರ್ಪಡೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು