ಮಂಗಳವಾರ, ಫೆಬ್ರವರಿ 18, 2020
18 °C

ರೇಪ್ ಇನ್ ಇಂಡಿಯಾ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ ಸ್ಮೃತಿ ಇರಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಾರ್ಖಂಡ್ ಚುನಾವಣಾ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ನೀಡಿದ್ದ ‘ರೇಪ್ ಇನ್ ಇಂಡಿಯಾ’ ಹೇಳಿಕೆಯು ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಬಿಜೆಪಿ ಸಚಿವೆ ಸ್ಮೃತಿ ಇರಾನಿ ರಾಹುಲ್ ಗಾಂಧಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.

ಅತ್ಯಾಚಾರವನ್ನು ಕೂಡ ರಾಜಕೀಯ ವಿಚಾರವನ್ನಾಗಿ ಬಳಸಿಕೊಳ್ಳುವ ಧೈರ್ಯವನ್ನು ರಾಹುಲ್ ಗಾಂಧಿ ತೋರಿದ್ದಾರೆ. ಹಾಗಾಗಿ ರಾಹುಲ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಅತ್ಯಾಚಾರವನ್ನು ರಾಜಕೀಯ ಅಪಹಾಸ್ಯಕ್ಕೆ ಬಳಸಿಕೊಳ್ಳಲಾಗಿದೆ. ಅತ್ಯಾಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುವ ರಾಜಕಾರಣಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ಖಂಡಿಸಬೇಕಾಗಿದೆ. ಎಲ್ಲ ಪುರುಷರು ಅತ್ಯಾಚಾರಿಗಳೆಂದು ಅವರು ಹೇಳುತ್ತಾರೆ.  ಭಾರತದಲ್ಲಿ ಮಹಿಳೆಯ ಅತ್ಯಾಚಾರವಾಗಲಿ ಎನ್ನುತ್ತಾರೆ. ನಾವು ಮೇಕ್ ಇನ್ ಇಂಡಿಯಾ ಎಂದರೆ, ಅವರು ರೇಪ್ ಇನ್ ಇಂಡಿಯಾ ಎನ್ನುತ್ತಾರೆ. ಇದು ಸರಿಯಾ ಎಂದು ಜನರನ್ನು ಕೇಳಲು ಬಯಸುತ್ತೇನೆ. ಅವರಿಗೆ ನೀಡಬೇಕಿರುವ ಶಿಕ್ಷೆಯನ್ನು ಜನರೇ ನಿರ್ಧರಿಸಲಿ ಎಂದು ಹೇಳಿದರು. 

ಲೋಕಸಭೆಯಲ್ಲಿ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವು ಬಿಜೆಪಿ ಸಂಸದರು ರಾಹುಲ್ ವಿರುದ್ಧ ಕಿಡಿಕಾರಿದರು. ಈ ಪರಿಣಾಮವಾಗಿ ಗೊಂದಲದ ಗೂಡಾದ ಸದನವನ್ನು ಹಲವು ಬಾರಿ ಮುಂದೂಡಲಾಯಿತು.

ರಾಹುಲ್ ಗಾಂಧಿ ಅವರಿಗೆ ಪ್ರತಿಕ್ರಿಯೆ ನೀಡಲು ಸ್ಪೀಕರ್ ಅವಕಾಶ ಕೊಡಲಿಲ್ಲ. ಬಳಿಕ ಸದನದ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ನಾನು ಕ್ಷಮೆ ಕೇಳುವುದಿಲ್ಲ. ನಾನು ಏನು ಹೇಳಿದೆ ಎನ್ನುವುದನ್ನು ವಿವರಿಸಲು ಅವಕಾಶ ಕೊಡಿ. ನರೇಂದ್ರ ಮೋದಿ ಅವರು ಮೇಕ್‌ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಆದರೆ ದಿನಪತ್ರಿಕೆಗಳ ಪುಟ ಬಿಡಿಸಿದಾಗ ಅದರ ಬದಲು ಕೇವಲ ಅತ್ಯಾಚಾರದ ಸುದ್ದಿಗಳೇ ಕಾಣಿಸುತ್ತವೆ ಎಂದಷ್ಟೇ ನಾನು ಹೇಳಿದ್ದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ‘ರೇಪ್‌ ಇನ್ ಇಂಡಿಯಾ’ ಹೇಳಿಕೆ ಸಮರ್ಥಿಸಿಕೊಂಡ ರಾಹುಲ್ ಗಾಂಧಿ

ಪೌರತ್ವ ಕಾಯ್ದೆ ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದರು.

ಇದನ್ನೂ ಓದಿ: ರೇಪ್ ಇನ್ ಇಂಡಿಯಾ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಗೆ ಬಿಜೆಪಿ ಬಿಗಿ ಪಟ್ಟು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು