ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಚಿಕಿತ್ಸೆ ಪಡೆದು ಸ್ವದೇಶಕ್ಕೆ ಮರಳಿದ ಅರುಣ್‌ ಜೇಟ್ಲಿ

Last Updated 9 ಫೆಬ್ರುವರಿ 2019, 11:43 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಹಣಕಾಸು ಸಚಿವ ಅರುಣ್‌ ಜೇಟ್ಲಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡು ಅಮೆರಿಕದಿಂದ ಶನಿವಾರ ಭಾರತಕ್ಕೆ ಮರಳಿದ್ದಾರೆ.

ಜನವರಿ 14 ರಂದು ಅರುಣ್‌ ಜೇಟ್ಲಿ ವೈದ್ಯಕೀಯ ತಪಾಸಣೆಗಾಗಿ ನ್ಯೂಯಾರ್ಕ್‌ಗೆ ತೆರಳಿದ್ದರು. ನಾನು ಮನೆಗೆ ಮರಳಿರುವುಕ್ಕೆ ಹರ್ಷಿಸುತ್ತೇನೆ ಎಂದು ಶನಿವಾರ ಟ್ವೀಟ್‌ ಮಾಡಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಕಿಡ್ನಿ ಸಮಸ್ಯೆಯಿಂದ ಏಮ್ಸ್‌ಗೆ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ದಾಖಲಾಗಿದ್ದ 66 ವರ್ಷ ವಯಸ್ಸಿನ ಅರುಣ್‌ ಜೇಟ್ಲಿ ಮೇನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಜೇಟ್ಲಿ ಅವರ ಅನುಪಸ್ಥಿತಿಯಲ್ಲಿಫೆಬ್ರುವರಿ 1ರಂದು ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅನ್ನು ಸಚಿವ ಪಿಯೂಶ್‌ ಗೋಯಲ್‌ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT