ಗುರುವಾರ , ಏಪ್ರಿಲ್ 2, 2020
19 °C

ಎನ್‌ಸಿಪಿ ನಾಯಕ ಶರದ್‌ ಪವಾರ್‌ ಭೇಟಿಯಾದ ಬಿಜೆಪಿ ಮುಖಂಡ ಸಂಜಯ್‌ ಕಾಕಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರ ಬಿಜೆಪಿ ಸಂಸದ ಸಂಜಯ್‌ ಕಾಕಡೆ ಅವರು ಇಂದು ಬೆಳಗ್ಗೆ ಎನ್‌ಸಿಪಿ ನಾಯಕ ಶರದ್‌ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಶಿವಸೇನಾ , ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯುವುದಕ್ಕೂ ಮುನ್ನ ನಡೆದ ಭೇಟಿಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. 

ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿದ ನಂತರ ಎಎನ್‌ಐ ಜೊತೆ ಮಾತನಾಡಿರುವ ಸಂಜಯ್‌ ಕಾಕಡೆ, ‘ವೈಯಕ್ತಿಯ ಕಾರಣಗಳಿಗಾಗಿ ಶರದ್‌ ಪವಾರ್‌ ಭೇಟಿಯಾಗಿದ್ದೆ,’ ಎಂದಿದ್ದಾರೆ.

ಅಜಿತ್‌ ಪವಾರ್‌ ಅವರನ್ನು ಎನ್‌ಸಿಪಿ ಶಾಸಕಾಂಗ ಸ್ಥಾನದಿಂದ ವಜಾಗೊಳಿಸಿದ ನಂತರ ಆಯ್ಕೆಯಾಗಿರುವ ಜಯಂತ್‌ ಪಾಟೀಲ್‌ ಅವರು ಸಹ ಈ ಭೇಟಿ ವೇಳೆಯಲ್ಲಿ ಹಾಜರಿದ್ದರು ಎನ್ನಲಾಗಿದೆ.  

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ತುರಾತುರಿಯಲ್ಲಿ ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆ ಪ್ರಶ್ನಿಸಿ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಸುಪ್ರೀಂ ಕೋರ್ಟ್‌ ಮೊರೆ ಹೋಗಿವೆ. ಮೂವರು ನ್ಯಾಯಮೂರ್ತಿಗಳ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ವಿಚಾರಣೆಗೂ ಮುನ್ನ ನಡೆದ ಬಿಜೆಪಿ ಮುಖಂಡ ಸಂಜಯ್‌ ಕಾಕಡೆ ಮತ್ತು ಎನ್‌ಸಿಪಿ ಮುಖಂಡ ಶರದ್‌ ಪವಾರ್ ನಡುವಿನ ಭೇಟಿಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು