ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ: ಬಿಜೆಪಿಗೆ ನೀಡಿದ್ದ ಬೆಂಬಲ ಹಿಂಪಡೆದ ಎಜಿಪಿ

ಮಸೂದೆ ವಿರೋಧಿಸಿ ನಾಳೆ ಅಸ್ಸಾಂ ಬಂದ್‌
Last Updated 7 ಜನವರಿ 2019, 13:48 IST
ಅಕ್ಷರ ಗಾತ್ರ

ಗುವಾಹಟಿ: ಆಡಳಿತಾರೂಢ ಬಿಜೆಪಿಗೆ ನೀಡಿದ್ದ ಬೆಂಬಲವನ್ನುಅಸ್ಸಾಂ ಗಣ ಪರಿಷದ್ (ಎಜಿಪಿ) ಸೋಮವಾರ ಹಿಂಪಡೆದಿದೆ. ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ‘ಪೌರತ್ವ (ತಿದ್ದುಪಡಿ) ಮಸೂದೆ’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ವಿರೋಧಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಜಿಪಿ ತಿಳಿಸಿದೆ.

‘ದೆಹಲಿಯಲ್ಲಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಜತೆಗೆ ಎಜಿಪಿ ನಿಯೋಗ ಸಭೆ ನಡೆಸಿದಾಗ, ಮಂಗಳವಾರ ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಳ್ಳುವಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದರು. ಬಳಿಕ ಬೆಂಬಲ ಹಿಂಪಡೆಯುವನಿರ್ಣಯ ಕೈಗೊಳ್ಳಲಾಯಿತು’ ಎಂದು ಎಜಿಪಿ ಅಧ್ಯಕ್ಷ ಹಾಗೂ ಸಚಿವ ಅತುಲ್ ಬೋರಾ ತಿಳಿಸಿದರು.

ಅಸ್ಸಾಂ ಬಂದ್‌ಗೆ ಕರೆ

ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳ 8 ಪ್ರಭಾವಿ ವಿದ್ಯಾರ್ಥಿ ಸಂಘಟನೆಗಳು, ಅಸ್ಸಾಂನ 40 ಸಾಮಾಜಿಕ ಸಂಘಟನೆಗಳು ಮಂಗಳವಾರ 11 ತಾಸುಗಳ ಬಂದ್‌ಗೆ ಕರೆ ನೀಡಿವೆ.

ವಿರೋಧ ಪಕ್ಷಗಳಿಂದಲೂ ಮಸೂದೆಗೆ ವಿರೋಧ

ಕಾಂಗ್ರೆಸ್, ಟಿಎಂಸಿ, ಸಿಪಿಐ(ಎಂ) ಸೇರಿದಂತೆ ವಿರೋಧ ಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ. ಪೌರತ್ವ ಸಾಂವಿಧಾನಿಕ ವಿಷಯ. ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದಧರ್ಮದ ಆಧಾರದ ಮೇಲೆ ಪೌರತ್ವ ನೀಡಲಾಗುವುದಿಲ್ಲ ಎನ್ನುವುದು ಇವರ ನಿಲುವು.

‘ಅಸ್ಸಾಂ ಹಿಂದುಗಳು ಅಲ್ಪಸಂಖ್ಯಾತರಾಗುವ ಭೀತಿ’

ಈ ಮಸೂದೆ ಅಂಗೀಕಾರವಾಗದಿದ್ದರೆ ಮುಂದಿನ ಐದು ವರ್ಷಗಳಲ್ಲಿ ಅಸ್ಸಾಂ ಹಿಂದುಗಳು ಅಲ್ಪಸಂಖ್ಯಾತರಾಗಲಿದ್ದಾರೆ ಎಂದು ಅಸ್ಸಾಂನ ಸಚಿವ ಹಿಮಂತ ಬಿಸ್ವಾ ಶರ್ಮ ಹೇಳಿದ್ದಾರೆ.

ಮಸೂದೆ ಅಂಗೀಕಾರವಾಗದಿದ್ದರೆ,ಅಸ್ಸಾಂ ಮತ್ತೊಂದು ಕಾಶ್ಮೀರವಾಗಲಿ ಎಂದು ಬಯಸುವವರಿಗೆ ಲಾಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT