ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ: ಶರದ್‌ ಪವಾರ್ ಭವಿಷ್ಯ

Last Updated 13 ಮಾರ್ಚ್ 2019, 5:07 IST
ಅಕ್ಷರ ಗಾತ್ರ

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗೆಲುವು ದಾಖಲಿಸಿದರೂ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ನ್ಯಾಷನಲ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಭವಿಷ್ಯ ನುಡಿದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಈ ಸಲದ ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿ ಉಂಟುಮಾಡಲಿದೆ, ಬಿಜೆಪಿಗೆ ಅಗತ್ಯ ಸಂಖ್ಯಾ ಬಲದ ಕೊರತೆ ಎದುರಾಗಲಿದೆ, ಒಂದು ವೇಳೆಬಿಜೆಪಿ ಇತರೆ ಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿದರೂನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಾರರು ಎಂದು ಅವರು ತಿಳಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ 326 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ 283 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿತ್ತು.

ಮಹಾರಾಷ್ಟ್ರದಲ್ಲಿ ಬಿಜೆಪಿ 48 ಸ್ಥಾನಗಳ ಪೈಕಿ 45ರಲ್ಲಿ ಗೆಲ್ಲಲಿದೆ ಎಂದುಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ಅವರ ಈ ಹೇಳಿಕೆ ತಪ್ಪು, ಯಾಕೆಂದರೆ ಬಿಜೆಪಿ 48 ಸ್ಥಾನಗಳನ್ನು ಗೆಲ್ಲಲಿದೆ ಎಂದು ಶರದ್‌ ಪವಾರ್ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT