ಶನಿವಾರ, ಮಾರ್ಚ್ 28, 2020
19 °C

ಬಿಜೆಪಿ ಶಾಸಕನ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ : ಪ್ರಕರಣ ದಾಖಲಿಸಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬುಲಂದ್‌ಶಹರ್‌ (ಉತ್ತರ ಪ್ರದೇಶ): ಸ್ಥಳೀಯ ಶಾಸಕರ ಪುತ್ರನೊಬ್ಬನು ಮದುವೆ ಸಮಾರಂಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದಾನೆ. ನಿಷೇಧದ ಹೊರತಾಗಿಯೂ ಬಂದೂಕು ಬಳಸಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ. 

ಗಾಳಿಯಲ್ಲಿ ಗುಂಡು ಹಾರಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಆರೋಪಿ ಕುರೂಜ್‌ ಕ್ಷೇತ್ರದ ಶಾಸಕ ವಿಜೇಂದ್ರ ಸಿಂಗ್‌ ಕಾಥಿಕ್‌ ಅವರ ಮಗನಾಗಿದ್ದಾನೆ.

ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಬಳಿಕ ಪೊಲೀಸರ ಕಣ್ಣಿಗೆ ಬಿದ್ದಿದೆ.  ವಿಡಿಯೊದಲ್ಲಿ ಗುಂಡು  ಹಾರಿಸಿದವನನ್ನು  ಸ್ಥಳೀಯ ಶಾಸಕನ ಮಗನೆಂದು ಗುರುತಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ಸಂತೋಶ್ ಕುಮಾರ್ ಹೇಳಿದ್ದಾರೆ.

ಸಮಾರಂಭಗಳಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದರೆ ₹1,00,000 ದಂಡ ಅಥವಾ 2 ವರ್ಷ ಜೈಲುಶಿಕ್ಷೆ ವಿಧಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು