ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲಿಗಿ ಸದಸ್ಯರ ಮಾಹಿತಿ ನೀಡಿದವರಿಗೆ ₹ 11 ಸಾವಿರ ಬಹುಮಾನ ಘೋಷಿಸಿದ ಬಿಜೆಪಿ ಸಂಸದ

ಕೊರೊನಾ ಪತ್ತೆ ಪರೀಕ್ಷೆಗೆ ಒಳಗಾಗದೆ ತಲೆಮರೆಸಿಕೊಂಡು ಓಡಾಡುವವರನ್ನು ಉಲ್ಲೇಖಿಸಿ ಘೋಷಣೆ
Last Updated 25 ಏಪ್ರಿಲ್ 2020, 9:14 IST
ಅಕ್ಷರ ಗಾತ್ರ

ಲಖನೌ: ಕೊರೊನಾ ಪತ್ತೆ ಪರೀಕ್ಷೆಗೆ ಒಳಗಾಗದೆ ತಲೆಮರೆಸಿಕೊಂಡು ಓಡಾಡುವ ತಬ್ಲಿಗಿ ಜಮಾತ್ ಸದಸ್ಯರ ಕುರಿತು ಮಾಹಿತಿ ನೀಡುವವರಿಗೆ ₹ 11 ಸಾವಿರ ನಗದು ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಸಲೀಮ್‌ಪುರದ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಘೋಷಿಸಿದ್ದಾರೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ತಬ್ಲಿಗಿ ಜಮಾತ್‌ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರು ಅಥವಾ ವಿದೇಶದಿಂದ ವಾಪಸಾದವರು ಅನೇಕರು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಮಾಡಿಲ್ಲ. ಪರೀಕ್ಷೆಗೆ ಒಳಪಟ್ಟಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಅಂತಹವರು ತಮ್ಮ ಪ್ರಯಾಣದ ಇತಿಹಾಸದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಸಂಸದರು ಹೇಳಿದ್ದಾರೆ. ಒಂದು ವೇಳೆ ಮಾಹಿತಿ ನೀಡದೇ ಇದ್ದಲ್ಲಿ ಅಂತಹವರ ಬಗ್ಗೆ ತಿಳಿಸುವವರಿಗೆ ನಗದು ಬಹುಮಾನ ನೀಡುವುದಾಗಿಯೂ ಹೇಳಿದ್ದಾರೆ.

ದೆಹಲಿಯಲ್ಲಿ ಮಾರ್ಚ್‌ ತಿಂಗಳಲ್ಲಿ ನಡೆದಿದ್ದ ತಬ್ಲಿಗಿ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ ಅನೇಕರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ದೇಶದ ನಾನಾ ಕಡೆಗಳಿಂದ ಜನ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ಪರಿಣಾಮವಾಗಿ ದೇಶದ ವಿವಿಧೆಡೆಗಳಿಗೆ ಸೋಂಕು ಹರಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT