ಮಂಗಳವಾರ, ಫೆಬ್ರವರಿ 18, 2020
17 °C
ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಸಂದೇಶ ರವಾನಿಸಲು ಸಚಿವಸ್ಥಾನಕ್ಕೂ ರಾಜೀನಾಮೆ ನೀಡಿದ್ದ ಸಿಂಗ್

ರಾಜ್ಯಸಭಾ ಸದಸ್ಯತ್ವಕ್ಕೆ ಬಿಜೆಪಿಯ ಬೀರೇಂದರ್ ಸಿಂಗ್ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಜೆ‍ಪಿ ರಾಜ್ಯಸಭಾ ಸದಸ್ಯ ಬೀರೇಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ರಾಜ್ಯಸಭೆ ಸದಸ್ಯತ್ವದ ಅವಧಿ 2022ರ ಆಗಸ್ಟ್‌ 1ರವರೆಗೆ ಇತ್ತು.

‘ಹರಿಯಾಣವನ್ನು ಪ್ರತಿನಿಧಿಸುತ್ತಿರುವ ಚೌಧರಿ ಬೀರೇಂದರ್ ಸಿಂಗ್ ಅವರು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ರಾಜ್ಯಸಭೆಯ ಸಭಾಪತಿಗಳು ಅದನ್ನು 2020ರ ಜನವರಿ 20ರಿಂದ ಅನ್ವಯವಾಗುವಂತೆ ಅಂಗೀಕರಿಸಿದ್ದಾರೆ’ ಎಂದು ರಾಜ್ಯಸಭೆಯ ಪ್ರಕಟಣೆ ತಿಳಿಸಿದೆ.

ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಸಂದೇಶ: 2019ರ ಲೋಕಸಭೆ ಚುನಾವಣೆಯಲ್ಲಿ ಬೀರೇಂದರ್ ಅವರ ಪುತ್ರನಿಗೆ ಹಿಸ್ಸಾರ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಕ್ಕಿತ್ತು. ಆ ಸಂದರ್ಭದಲ್ಲಿ ಅವರು ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಸಂದೇಶ ರವಾನಿಸಲು ಸಚಿವ ಸ್ಥಾನ ಹಾಗೂ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ರಾಜ್ಯಸಭೆ ಸದಸ್ಯತ್ವ ತ್ಯಜಿಸಲು ಆಗ ಬಿಜೆಪಿ ಹೈಕಮಾಂಡ್ ಒಪ್ಪಿರಲಿಲ್ಲ.

ಸುಮಾರು ನಾಲ್ಕು ದಶಕ ಕಾಂಗ್ರೆಸ್‌ ಪಕ್ಷದಲ್ಲಿದ್ದ ಬೀರೇಂದ್ರ, 2014ರಲ್ಲಿ ಬಿಜೆಪಿ ಸೇರಿದ್ದರು. ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಸಚಿವರಾಗಿದ್ದರು. 2016ರಲ್ಲಿ ಅವರನ್ನು ಉಕ್ಕು ಖಾತೆ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು