ಅತ್ಯಾಚಾರ ಹೆಚ್ಚಳ ಮುಸ್ಲಿಮರು ಕಾರಣ: ಬಿಜೆಪಿ ಸಂಸದ

7

ಅತ್ಯಾಚಾರ ಹೆಚ್ಚಳ ಮುಸ್ಲಿಮರು ಕಾರಣ: ಬಿಜೆಪಿ ಸಂಸದ

Published:
Updated:

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮರ ಜನಸಂಖ್ಯೆಯಿಂದಾಗಿ ಭಯೋತ್ಪಾದನೆ,ಕೊಲೆ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಉತ್ತರ ಪ್ರದೇಶದ ಬಿಜೆಪಿ ಸಂಸದ ಹರಿ ಓಂ ಪಾಂಡೆ ಹೇಳಿದ್ದಾರೆ.

ಮುಸ್ಲಿಮರ ಜನಸಂಖ್ಯೆ ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಭಾರತ ಮತ್ತೊಮ್ಮೆ ಇಬ್ಭಾಗವಾಗಲಿದೆ. ಮತ್ತೊಂದು ಪಾಕಿಸ್ತಾನ ಉದಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ದೇಶ ಇಬ್ಭಾಗವಾಗುವುದನ್ನು ತಪ್ಪಿಸಲು ಸಂಸತ್‌ನಲ್ಲಿ ಜನಸಂಖ್ಯೆ ನಿಯಂತ್ರಣ ಮಸೂದೆ ಮಂಡಿಸಬೇಕು ಎಂದು ಅಂಬೇಡ್ಕರ್‌ ನಗರ ಲೋಕಸಭಾ ಕ್ಷೇತ್ರದ ಸದಸ್ಯ ಪಾಂಡೆ ಒತ್ತಾಯಿಸಿದ್ದಾರೆ.

ಒಂದು ವೇಳೆ ಮುಸ್ಲಿಮರ ಜನಸಂಖ್ಯೆ ನಿಯಂತ್ರಿಸದಿದ್ದರೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಲಿದೆ. ದೇಶದ ಆರ್ಥಿಕ ಅಭಿವೃದ್ಧಿ ಕುಂಠಿತಗೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !