ಮಂಗಳವಾರ, ಅಕ್ಟೋಬರ್ 15, 2019
26 °C

ರಾಜ್ಯಸಭೆ | ಉತ್ತರಪ್ರದೇಶ, ಬಿಹಾರ: ಬಿಜೆಪಿಯಿಂದ ತ್ರಿವೇದಿ, ದುಬೆ ಸ್ಪರ್ಧೆ

Published:
Updated:

ನವದೆಹಲಿ: ಉತ್ತರ ಪ್ರದೇಶ ಮತ್ತು ಬಿಹಾರದಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಪಕ್ಷದ ವಕ್ತಾರ ಸುಧಾಂಶು ತ್ರಿವೇದಿ ಹಾಗೂ ಲೋಕಸಭೆಯ ಮಾಜಿ ಸದಸ್ಯ ಸತೀಶ್‌ ಚಂದ್ರ ದುಬೆ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಮತ್ತು ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಅವರ ನಿಧನದಿಂದಾಗಿ ರಾಜ್ಯಸಭೆಯ ಎರಡು ಸ್ಥಾನಗಳು ತೆರ ವಾಗಿದ್ದವು. 

ತ್ರಿವೇದಿ ಬಿಜೆಪಿಯ ವಕ್ತಾರ ಹುದ್ದೆ ಜೊತೆಗೆ. ರಕ್ಷಣಾ ಸಚಿವ ರಾಜ ನಾಥ್ ಸಿಂಗ್ ಅವರ ಆಪ್ತವಲಯ ದಲ್ಲೂ ಗುರುತಿಸಿಕೊಂಡಿದ್ದಾರೆ. ಅವರ ರಾಜಕೀಯ ಸಲಹೆಗಾರರಾಗಿದ್ದಾರೆ. ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ದುಬೆ ಅವರಿಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನಿರಾಕರಿಸಿತ್ತು.

Post Comments (+)