ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ ₹ 100 ಕೋಟಿ ಆಮಿಷ: ದಿಗ್ವಿಜಯ್‌ ಸಿಂಗ್‌ 

7

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ ₹ 100 ಕೋಟಿ ಆಮಿಷ: ದಿಗ್ವಿಜಯ್‌ ಸಿಂಗ್‌ 

Published:
Updated:

ಭೋಪಾಲ್‌: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಉರುಳಿಸಲು ಬಿಜೆಪಿ ನಮ್ಮ ಶಾಸಕರಿಗೆ ₹100 ಕೋಟಿ ಆಮಿಷ ಒಡ್ಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ತಾವು ಮಾಡಿರುವ ಆರೋಪವನ್ನು ಸಾಕ್ಷಿ ಸಮೇತ ಸಾಬೀತುಪಡಿಸುವುದಾಗಿ ಸಿಂಗ್ ತಿಳಿಸಿದ್ದಾರೆ. 

ಬಿಜೆಪಿ ಶಾಸಕ ನಾರಾಯಣ ತ್ರಿಪಾಠಿ ಸಬಲ್‌ಘರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬೈಜನಾಥ್ ಕುಶ್ವಾ ಅವರನ್ನು ಡಾಬಾವೊಂದಕ್ಕೆ ಕರೆದುಕೊಂಡು ಹೋಗಿ ಬಿಜೆಪಿಯ ಮಾಜಿ ಸಚಿವರಾದ ನರೋತ್ತಮ ಮಿಶ್ರಾ ಹಾಗೂ ವಿಶ್ವಾಸ್‌ ಸಾರಂಗ್ ಅವರೊಂದಿಗೆ ಭೇಟಿ ಮಾಡಿಸಿದ್ದಾರೆ. ಅವರು ನಮ್ಮ ಶಾಸಕನಿಗೆ ನೂರು ಕೋಟಿ ರೂಪಾಯಿ ಆಮಿಷ ಒಡ್ಡಿರುವುದಲ್ಲದೆ ಬಿಜೆಪಿ ಸರ್ಕಾರ ರಚನೆಯಾದರೆ ಮಂತ್ರಿ ಸ್ಥಾನ ನೀಡುವುದಾಗಿ ಹೇಳಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಬೈಜನಾಥ್ ಕುಶ್ವಾ ಮಾತ್ರವಲ್ಲದೆ ಇತರೆ ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಗಾಳ ಹಾಕಿದೆ. ಆದರೆ ಕುಶ್ವಾ ಅವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ. 

ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಮಿಶ್ರಾ ಇದು ಕೇವಲ ಪ್ರಚಾರದ ತಂತ್ರ, ಸಾಕ್ಷಿಗಳು ಇದ್ದರೆ ದಿಗ್ವಿಜಯ್ ಸಿಂಗ್ ಬಹಿರಂಗಪಡಿಸಿ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ. 

ದಿಗ್ವಿಜಯ್‌ ಸಿಂಗ್ ಗಾಳಿ ಸುದ್ದಿಯ ಜನಕ ಎಂಬುದು ಎಲ್ಲರಿಗೂ ಗೊತ್ತಿದೆ, ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವುದು ಬೇಡ ಎಂದು ಬಿಜೆಪಿಯ ವಿರೋಧ ಪಕ್ಷದ ನಾಯಕ ಗೋಪಾಲ್ ಭಾರ್ಗವ ತಿಳಿಸಿದ್ದಾರೆ. 

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ ಪಕ್ಷ ಪಕ್ಷೇತರ ಶಾಸಕರೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದೆ. 

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 0

  Sad
 • 0

  Frustrated
 • 7

  Angry

Comments:

0 comments

Write the first review for this !