ಕೇರಳ ವಿಧಾನಸೌಧಕ್ಕೆ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಂಘರ್ಷ: ಮಹಿಳೆಯರಿಗೆ ಗಾಯ

7

ಕೇರಳ ವಿಧಾನಸೌಧಕ್ಕೆ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಂಘರ್ಷ: ಮಹಿಳೆಯರಿಗೆ ಗಾಯ

Published:
Updated:

ತಿರುವನಂತಪುರಂ: ಕೇರಳ ವಿಧಾನಸೌಧಕ್ಕೆ ಬಿಜೆಪಿ, ಯುವಮೋರ್ಚಾ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಸಂಘರ್ಷವುಂಟಾಗಿದೆ. ಶಬರಿಮಲೆಯಲ್ಲಿ ನಿಷೇಧಾಜ್ಞೆ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎನ್ ರಾಧಾಕೃಷ್ಣನ್ ಅವರು ಕಳೆದ ಎಂಟು ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದೀಗ ಅವರ ದೇಹ ಕ್ಷೀಣಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಮಲಯಾಳ ಮನೋರಮ ಪತ್ರಿಕೆ ವರದಿ ಮಾಡಿದೆ.

ರಾಧಾಕೃಷ್ಣನ್ ಅವರ ಜೀವ ಉಳಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಈ ಪ್ರತಿಭಟನೆ ಕೈಗೊಂಡಿದ್ದಾರೆ.
ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸ್ ಪಡೆ ಮೇಲೆ ಕಲ್ಲು ತೂರಾಟ ಮಾಡಿದ್ದು  ಸಂಘರ್ಷಕ್ಕೆ ಕಾರಣವಾಗಿದೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಆ ವೇಳೆ ಅಲ್ಲಿಂದ ಚದುರಿ ಓಡಿದ ಕಾರ್ಯಕರ್ತರು ಪೊಲೀಸರ ಕ್ರಮ ವಿರೋಧಿಸಿ ಮತ್ತೊಮ್ಮೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ವಿರುದ್ಧ  ಘೋಷಣೆ ಕೂಗಿದ ಕಾರ್ಯಕರ್ತರು  ರಸ್ತೆ ತಡೆಯೊಡ್ಡಿದ್ದಾರೆ. ಈ ಪ್ರತಿಭಟನೆಯಲ್ಲಿ ಹಲವಾರು ಮಹಿಳೆಯರೂ ಭಾಗಿಯಾಗಿದ್ದರು.
ಪೊಲೀಸರ ವಿರುದ್ಧ ನಡೆದ ಕಲ್ಲು ತೂರಾಟದಲ್ಲಿ ಮಹಿಳೆಯರಿಗೆ ಗಾಯಗಳಾಗಿವೆ.

ನಾಳೆ  ತಿರುವನಂತಪುರಂ ಬಂದ್
ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ನಾಳೆ ತಿರುವನಂತಪುರಂ ಜಿಲ್ಲೆಯಲ್ಲಿ ಬಂದ್‍ಗೆ ರಾಜ್ಯ ಬಿಜೆಪಿ ಕರೆ ನೀಡಿದೆ. 

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !